Breaking News

ಹರ್ಷ ಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ವಿರುದ್ಧ ದೇಶದ್ರೋಹ ಆರೋಪ; ತನಿಖೆಗೆ ಕೋರ್ಟ್‌ ಆದೇಶ

Spread the love

ಬೆಂಗಳೂರು: ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಚಿವ ಈಶ್ವರಪ್ಪ ವಿರುದ್ಧ ದೇಶದ್ರೋಹ ಪ್ರಕರಣ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಆದೇಶ ನೀಡಿದೆ.

ಶಿವಮೊಗ್ಗದಲ್ಲಿ ಕಳೆದ ತಿಂಗಳ 20ರಂದು ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ತನಿಖೆಯ ಹಂತದಲ್ಲಿರುವಾಗಲೇ ಈ ಸಂಬಂಧ ಪ್ರಚೋದನಕಾರಿ, ಸಾರ್ವಜನಿಕ ಹೇಳಿಕೆ ನೀಡಿ ಹಿಂದೂ-ಮುಸ್ಲಿಂ ಸಮುದಾಯದ ನಡುವೆ ವೈರತ್ವ ಉಂಟಾಗುವಂತೆ ಮಾಡಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಮತ್ತು ಬಿಜೆಪಿ ಮುಖಂಡ ಚನ್ನಬಸಪ್ಪ ವಿರುದ್ಧ ದೇಶದ್ರೋಹ ಪ್ರಕರಣ ತನಿಖೆ ನಡೆಸಲು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಆದೇಶಿಸಿದೆ.

 

ಈ ಕುರಿತಂತೆ ಶಿವಮೊಗ್ಗದ ಇಲಿಯಾಸ್‌ ನಗರದ ನ್ಯೂ ಮಂಡಲಿ ರಸ್ತೆಯ ‘ಶಾಂತಿ ಸಂಘಟನೆ’ ಮುಖಂಡ ರಿಯಾಜ್‌ ಅಹಮದ್ ಸಲ್ಲಿಸಿರುವ ಖಾಸಗಿ ದೂರನ್ನು ವಿಚಾರಣೆ ನಡೆಸಿದ, ‘ಕರ್ನಾಟಕದ ಹಾಲಿ-ಮಾಜಿ ಶಾಸಕರು ಮತ್ತು ಸಂಸದರ ವಿರುದ್ಧದ ಪ್ರಕರಣಗಳ ವಿಚಾರಣೆಯ ವಿಶೇಷ ಮ್ಯಾಜಿಸ್ಟ್ರೇಟ್‌ ಕೋರ್ಟ್‌’ ನ್ಯಾಯಾಧೀಶೆ ಪ್ರೀತ್‌ ಜೆ ಅವರು ಈ ಕುರಿತಂತೆ ತನಿಖೆ ನಡೆಸಲು ನಿರ್ದೇಶಿಸಿದ್ದಾರೆ


Spread the love

About Laxminews 24x7

Check Also

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಹ್ವಾನ ವಿರೋಧಿಸಿ ಮತ್ತೆರಡು ಪಿಐಎಲ್ ಸಲ್ಲಿಕೆ

Spread the loveನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ