Breaking News

ಯುಗಾದಿ ಹೊತ್ತಲ್ಲೇ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ

Spread the love

ಬೆಂಗಳೂರು : ಯುಗಾದಿ ಹೊತ್ತಲ್ಲೇ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ‘ಗ್ರಾಮೀಣಾಭಿವೃದ್ಧಿ ಇಲಾಖೆ ಯಿಂದ ‘6,406 ಹುದ್ದೆ’ಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ದಿ ಸಹಾಯಕ ( ಗ್ರೇಡ್ 2) ಹುದ್ದೆಗೆ ಪದವಿ ಪೂರ್ವ ಶಿಕ್ಷಣದಲ್ಲಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರತಕ್ಕದ್ದು, ಮತ್ತು ಕಂಪ್ಯೂಟರ್ ಕಲಿಕೆ ಅಗತ್ಯವಾಗಿದೆ.

ಹಾಗೂ ಹಿಂದಿನ ಮಂಡಲ ಪಂಚಾಯತ್ ಅಥವಾ ಗ್ರಾಮ ಪಂಚಾಯತ್ ಗಳಲ್ಲಿ ಬಿಲ್ ಕಲೆಕ್ಟರ್ ಗಳು/ಗುಮಾಸ್ತರು/ಬೆರಳಚ್ಚುಗಾರರು/ಗುಮಾಸ್ತ ಕಮ್ ಡೇಟಾ ಎಂಟ್ರಿ ಆಪರೇಟರ್ ಗಳಾಗಿ 6 ವರ್ಷಗಳಿಗಿಂತ ಕಡಿಮೆ ಸೇವೆ ಸಲ್ಲಿಸಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21-400-42,000 ರೂ ವೇತನ ನೀಡಲಾಗುತ್ತದೆ.

ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ವೃಂದದ ಹುದ್ದೆಗೆ ಪದವಿ ಪೂರ್ವ ಶಿಕ್ಷಣದಲ್ಲಿ ವಾಣಿಜ್ಯ ವಿಷಯದೊಂದಿಗೆ ತೇರ್ಗಡೆಯಾಗಿರತಕ್ಕದ್ದು ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರತಕ್ಕದ್ದು ಮತ್ತು ಕಂಪ್ಯೂಟರ್ ಕಲಿಕೆ ಅಗತ್ಯವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21-400-42,000 ರೂ ವೇತನ ನೀಡಲಾಗುತ್ತದೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ