ಕೇಜ್ರಿವಾಲ್ ಮತ್ತು ಭಗವಂತ್ ಮಾನ್ ಇಬ್ಬರೂ ಇಂದು ಮೊದಲು ಸಬರಮತಿ ಆಶ್ರಮಕ್ಕೆ ಭೇಟಿ ಕೊಟ್ಟು ಅಲ್ಲಿಂದ 2 ಕಿಮೀ ದೂರದವರೆಗೆ ರೋಡ್ ಶೋ ನಡೆಸಲಿದ್ದಾರೆ. ಇದಕ್ಕೆ ಪಕ್ಷ ತಿರಂಗ ಯಾತ್ರಾ ಎಂದು ಹೆಸರಿಟ್ಟುಕೊಂಡಿದೆ.ದೆಹಲಿ: ಅರವಿಂದ್ ಕೇಜ್ರಿವಾಲ್(Arvind Kejriwal)ಅವರ ಆಮ್ ಆದ್ಮಿ ಪಕ್ಷ(Aam Aadmy Party)ತನ್ನ ವ್ಯಾಪ್ತಿಯನ್ನು ಹೆಚ್ಚಿಸುತ್ತಿದೆ.
ಈ ಬಾರಿ ಚುನಾವಣೆಯಲ್ಲಿ ಪಂಜಾಬ್ ರಾಜ್ಯವನ್ನು ಗೆದ್ದುಕೊಂಡಿದೆ. ಇದೀಗ ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್ನಲ್ಲಿ ಪಕ್ಷದ ಪ್ರಾಬಲ್ಯ ಹೆಚ್ಚಿಸಲು ಸಿದ್ಧತೆ ನಡೆಸುತ್ತಿದೆ. ಗುಜರಾತ್ನಲ್ಲಿ ಇಂದಿನಿಂದ (ಏಪ್ರಿಲ್ 2) ಆಪ್ ಪಕ್ಷ ವಿವಿಧ ಕಾರ್ಯಕ್ರಮಗಳನ್ನು ನಡೆಸಲಿದ್ದು, ಅಲ್ಲಿನ ಜನರನ್ನು ಸೆಳೆಯುವ ಪ್ರಯತ್ನದಲ್ಲಿ ತೊಡಗಿದೆ. ಗುಜರಾತ್ನಲ್ಲಿ 1995ರಿಂದ ಇಲ್ಲಿಯವರೆಗೆ ಬಿಜೆಪಿ ಪಕ್ಷವೇ ಆಡಳಿತದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದ ರಾಜ್ಯವರು. ಕಾಂಗ್ರೆಸ್ ಕೈಯಲ್ಲಿದ್ದ ಪಂಜಾಬ್ನಲ್ಲಿ ಸರ್ಕಾರ ರಚನೆ ಮಾಡಿದ ಆಪ್ ಇದೀಗ ಪ್ರಧಾನಿ ಮೋದಿ ತವರು ರಾಜ್ಯಕ್ಕೇ ಪ್ರವೇಶ ಮಾಡಿದೆ. ಅಷ್ಟೇ ಅಲ್ಲ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಇಬ್ಬರೂ ಈಗಾಗಲೇ ಅಹ್ಮದಾಬಾದ್ಗೆ ತೆರಳಿದ್ದಾರೆ.
ಕೇಜ್ರಿವಾಲ್ ಮತ್ತು ಭಗವಂತ್ ಮಾನ್ ಇಬ್ಬರೂ ಇಂದು ಮೊದಲು ಸಬರಮತಿ ಆಶ್ರಮಕ್ಕೆ ಭೇಟಿ ಕೊಟ್ಟು ಅಲ್ಲಿಂದ 2 ಕಿಮೀ ದೂರದವರೆಗೆ ರೋಡ್ ಶೋ ನಡೆಸಲಿದ್ದಾರೆ. ಇದಕ್ಕೆ ಪಕ್ಷ ತಿರಂಗ ಯಾತ್ರಾ ಎಂದು ಹೆಸರಿಟ್ಟುಕೊಂಡಿದೆ. ಬಳಿಕ ಭಾನುವಾರ ಇವರಿಬ್ಬರೂ ಅಹ್ಮದಾಬಾದ್ನ ಸ್ವಾಮಿನಾರಾಯಣ್ ದೇಗುಲಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸುವರು. ಗುಜರಾತ್ನಲ್ಲಿ 2017ರ ವಿಧಾನಸಭೆ ಚುನಾವಣೆಯಲ್ಲಿಯೂ ಆಪ್ ಪಕ್ಷ ಸ್ಪರ್ಧಿಸಿತ್ತು. ಆದರೆ ಒಂದೇ ಒಂದು ಕ್ಷೇತ್ರವನ್ನು ಗೆಲ್ಲಲೂ ವಿಫಲವಾಗಿತ್ತು. ಒಟ್ಟು 29 ಕ್ಷೇತ್ರಗಳು ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದರು. ಎಲ್ಲರೂ ಸೋತಿದ್ದರು. ಆದರೆ ಈ ಬಾರಿ ಅರವಿಂದ್ ಕೇಜ್ರಿವಾಲ್ ತುಂಬ ಮುಂಚಿನಿಂದಲೇ ಪಕ್ಷವನ್ನು ಪ್ರಬಲ ಗೊಳಿಸಲು ಪ್ರಾರಂಭಿಸಿದ್ದಾರೆ.