Breaking News

ಬೀಳ್ಕೊಡುಗೆ ಕಾರ್ಯಕ್ರಮ,ಐಟಂ ಸಾಂಗ್‍ಗೆ ಪೊಲೀಸ್ ಅಧಿಕಾರಿಗಳು ಕುಣಿದು ಕುಪ್ಪಳಿಸಿರುವ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ

Spread the love

ಚಾಮರಾಜನಗರ: ಐಟಂ ಸಾಂಗ್‍ಗೆ ಪೊಲೀಸ್ ಅಧಿಕಾರಿಗಳು ಕುಣಿದು ಕುಪ್ಪಳಿಸಿರುವ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಡ್ಯಾನ್ಸ್‌ ಬಗ್ಗೆ ಪರ-ವಿರೋಧದ ಬಗ್ಗೆ ಚರ್ಚೆ ನಡೆಯುತ್ತಿದೆ. ಕೊಳ್ಳೇಗಾಲ DYSP ನಾಗರಾಜು, ಪೊಲೀಸ್ ಇನ್ಸ್‌ಪೆಕ್ಟರ್ ಶಿವರಾಜ್ ಮುದೋಳ್ PSI ಚೇತನ್ ಹಾಗು ಸಹೋದ್ಯೋಗಿ ಪೊಲೀಸ್ ಸಿಬ್ಬಂದಿಗಳು ನೃತ್ಯ ಮಾಡಿದ್ದಾರೆ.ಐಟಂ ಸಾಂಗ್ ಕುಣಿತದ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಸಬ್ ಇನ್ಸ್‍ಪೆಕ್ಟರ್ ಅಶೋಕ್ ವರ್ಗಾವಣೆ ಹಿನ್ನೆಲೆ, ಖಾಸಗಿ ರೆಸಾರ್ಟ್‍ನಲ್ಲಿ ಬೀಳ್ಕೊಡುಗೆ ಪಾನಗೋಷ್ಠಿ ನಡೆಸಲಾಗಿದೆ. ಈ ಬೀಳ್ಕೊಡುಗೆ ಪಾರ್ಟಿಯಲ್ಲಿ ಮದ್ಯದ ನಶೆಯಲ್ಲಿ ಪೊಲೀಸ್ ಅಧಿಕಾರಿಗಳು ತೇಲಾಡಿದ್ದಾರೆ.

ಪೊಲೀಸ್ ಅಧಿಕಾರಿಗಳಿಂದ ಅಸಭ್ಯ ರೀತಿಯಲ್ಲಿ ನೃತ್ಯ ಮಾಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಸರ್ಕಾರಿ ನೌಕರರಿಗೆ ತರವಲ್ಲದ ವರ್ತನೆ ಮಾಡಿದ್ದಾರೆಂಬ ಆರೋಪವಿದೆ. ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಪೊಲೀಸ್ ಮ್ಯಾನುವೆಲ್ ಪ್ರಕಾರ ಶಿಸ್ತು ಪಾಲಿಸದೆ ಅಶಿಸ್ತು ಪ್ರದರ್ಶನ ಮಾಡಿದ್ದಾರೆ. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ