Breaking News

ಬಿಎ, ಬಿಕಾಂಗೂ ಎಂಟ್ರೆನ್ಸ್ ಎಕ್ಸಾಂ: ಪಿಯು ಅಂಕವಿನ್ನು ಲೆಕ್ಕಕ್ಕಿಲ್ಲ; ಪದವಿ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷೆ

Spread the love

ಉನ್ನತ ಶಿಕ್ಷಣಕ್ಕೆ ತಳಹದಿ ಹಾಗೂ ವೃತ್ತಿಪರ ಕೋರ್ಸ್​ಗಳಿಗೆ ದಿಕ್ಸೂಚಿಯಾಗಬೇಕಾದ ಪಿಯುಸಿ ವ್ಯಾಸಂಗ ಸದ್ದಿಲ್ಲದಂತೆ ಮಹತ್ವ ಕಳೆದುಕೊಳ್ಳುವಂತಹ ವಾತಾವರಣ ಗೋಚರಿಸಿದೆ. ಪದವಿ ಪ್ರವೇಶಕ್ಕೂ ಇನ್ಮುಂದೆ ರಾಷ್ಟ್ರೀಯ ಪ್ರವೇಶ ಪರೀಕ್ಷೆ ವ್ಯವಸ್ಥೆ ಜಾರಿಯಾಗುತ್ತಿದೆ.

ಇದರಿಂದ ಡಿಗ್ರಿ ಪ್ರವೇಶಾತಿ ವೇಳೆ ಪಿಯುಸಿ ಅಂಕಗಳ ಮಹತ್ವ ಇಲ್ಲವಾಗಲಿದೆ. ಹೀಗಾಗಿ, ಪ್ರವೇಶ ಪರೀಕ್ಷೆಗಳ ಭರಾಟೆಯಲ್ಲಿ ಪಿಯುಸಿ ಮೌಲ್ಯ ಕಳೆದು ಹೋಗುತ್ತಿದೆಯೇ? ಎರಡು ವರ್ಷಗಳ ಕೋರ್ಸ್ ನಿಷ್ಪ›ಯೋಜಕವೇ? ಎಂಬ ಚರ್ಚೆ ಶೈಕ್ಷಣಿಕ ವಲಯದಲ್ಲಿ ಶುರುವಾಗಿದೆ.

ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಕಡ್ಡಾಯವಾಗಿರುವ ಪ್ರವೇಶ ಪರೀಕ್ಷೆ-ಸಿಯುಇಟಿಗೆ ರಾಜ್ಯದ ಸರ್ಕಾರಿ ವಿವಿಗಳು ಸಮ್ಮತಿಸುತ್ತಿವೆ. ಈ ವ್ಯವಸ್ಥೆ ಜಾರಿಯಾದರೆ ಸರ್ಕಾರಿ ಕಾಲೇಜುಗಳು, ವಿವಿಗಳಲ್ಲಿ ಪಿಯು ಅಂಕಗಳ ಆಧಾರದ ಮೇಲೆ ಸೀಟು ಗಿಟ್ಟಿಸಿಕೊಳ್ಳುವ ವ್ಯವಸ್ಥೆ ಕೊನೆಗೊಳ್ಳಲಿದೆ. ಸಿಇಟಿ, ಜೆಇಇ, ನೀಟ್ ಪರೀಕ್ಷೆಗಳಲ್ಲಿ ಪಡೆಯುವ ಅಂಕಗಳೇ ಮುಖ್ಯವಾಗಲಿವೆ.

ಬಿಎ, ಬಿಕಾಂ ಹಾಗೂ ಬಿಎಸ್​ಸಿಯಂತಹ ತಾಂತ್ರಿಕೇತರ ಶಿಕ್ಷಣಕ್ಕೂ ಕೇಂದ್ರ ಸರ್ಕಾರ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆ ನಡೆಸುತ್ತಿದೆ. ಸೆಂಟ್ರಲ್ ಯುನಿವರ್ಸಿಟಿ ಎಂಟ್ರೆನ್ಸ್ ಎಕ್ಸಾಂ (ಸಿಯುಇಟಿ) ಮಾದರಿಯನ್ನು ರಾಜ್ಯ ಸರ್ಕಾರಿ ಅಧೀನದ, ಖಾಸಗಿ ಹಾಗೂ ಡೀಮ್್ಡ ವಿವಿಗಳಿಗೂ ವಿಸ್ತರಿಸಲು ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಕಾರ್ಯತತ್ಪರವಾಗಿದೆ.

ಈ ನಿಟ್ಟಿನಲ್ಲಿ ಸೋಮವಾರ ರಾಜ್ಯ ಸರ್ಕಾರಿ ಅಧೀನದ 25 ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಯುಜಿಸಿ ಸಂವಾದ ನಡೆಸಿದೆ. ಇದರಲ್ಲಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಸಿಯುಇಟಿ ಪ್ರಕ್ರಿಯೆ ಮೂಲಕ ಪದವಿ ಕೋರ್ಸ್​ಗಳ ಪ್ರವೇಶಕ್ಕೆ ಬೆಂಬಲ ವ್ಯಕ್ತವಾಗಿದೆ. ಜತೆಗೆ, ಬಿಎ, ಬಿಕಾಂ ಹಾಗೂ ಬಿಎಸ್​ಸಿ ಹಾಗೂ ಇದೇ ಮಾದರಿಯ ಇತರ ಕೋರ್ಸ್​ಗಳಿಗೂ ಸಿಯುಇಟಿ ಅಂಕಗಳನ್ನು ಪರಿಗಣಿಸಲು ಸಮ್ಮತಿಸಿದ್ದಾರೆ ಎಂದು ಯುಜಿಸಿ ಅಧ್ಯಕ್ಷ ಎಂ. ಜಗದೀಶಕುಮಾರ್ ತಿಳಿಸಿದ್ದಾರೆ.

 


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ