ಬೆಂಗಳೂರು,ಏ.5- ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಶತಾಯಗತಾಯ ಸಂಪುಟಕ್ಕೆ ಸೇರ್ಪಡೆಯಾಗಲೇಬೇಕೆಂದು ಪಟ್ಟು ಹಿಡಿದಿರುವ ಆಕಾಂಕ್ಷಿಗಳ ದಂಡು ದೆಹಲಿಯಲ್ಲಿ ಲಾಬಿ ಆರಂಭಿಸಿದೆ.
ಸುಮಾರು ಒಂದು ಡಜನ್‍ಗೂ ಅಧಿಕ ಶಾಸಕರು ನಿನ್ನೆಯಿಂದಲೇ ದೆಹಲಿಗೆ ದೌಡಾಯಿಸಿದ್ದು ತಮ್ಮ ತಮ್ಮ ಗಾಡ್‍ಫಾದರ್‍ಗಳ ಮೂಲಕ ಸಂಪುಟಕ್ಕೆ ತಮ್ಮನ್ನು ಪರಿಗಣಿಸುವಂತೆ ಒತ್ತಡದ ತಂತ್ರ ಅನುಸರಿಸುತ್ತಿದ್ದಾರೆ.
ಇದರ ನಡುವೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಏಕಾಏಕಿ ನವದೆಹಲಿಗೆ ತೆರಳಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಕಳೆದ ಹಲವು ದಿನಗಳಿಂದ ವಿಜಯೇಂದ್ರ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳು ಕೇಳಿಬಂದಿದ್ದವು.