Breaking News

ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ

Spread the love

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮಂಗಳವಾರ(ಇಂದು) 26 ಹರೆಯಕ್ಕೆ ಕಾಲಿಟ್ಟಿದ್ದಾರೆ. ಈ ನಟಿಯ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸೋಶಿಯಲ್ ಮೀಡಿಯಾ ಸೇರಿದಂತೆ ಸಿನಿರಂಗದಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ರಶ್ಮಿಕಾ ಈ ಹುಟ್ಟು ಹಬ್ಬಕ್ಕೆ ವಿಶೇಷ ಎನ್ನುವಂತೆ ಇನ್ನೂ ಹೆಸರಿಡದ ಅವರ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ಈ ವೀಡಿಯೋದಲ್ಲಿ ರಶ್ಮಿಕಾ ಅಪರೂಪದ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ.

ಟಾಲಿವುಡ್ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದು, ಈ ಸಿನಿಮಾಗೆ ಇನ್ನೂ ಹೆಸರಿಟ್ಟಿಲ್ಲ. ಈ ಚಿತ್ರದಲ್ಲಿ ದಕ್ಷಿಣದ ನಟ, ನಿರ್ಮಾಪಕ ದುಲ್ಕರ್ ಸಲ್ಮಾನ್ ನಾಯಕನಾಗಿ ನಟಿಸುತ್ತಿದ್ದು, ಹನು ರಾಘವಪುಡಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ದುಲ್ಕರ್ ಅವರು ಲೆಫ್ಟಿನೆಂಟ್ ರಾಮ್ ಆಗಿ ಕಾಣಿಸಿಕೊಳ್ಳಲಿದ್ದು, ಮೃಣಾಲ್ ಠಾಕೂರ್ ಸೀತೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಹೊಸ ತಾರಾಬಳಗವನ್ನು ಪರಿಚಯಿಸಲಾಗಿದ್ದು, ರಶ್ಮಿಕಾ ಮಂದಣ್ಣ ಚಿತ್ರತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಈ ಸಿನಿಮಾ ದ್ವಿಭಾಷೆಗಳಲ್ಲಿ ಮೂಡಿಬರಲಿದೆ.

ಈ ಚಿತ್ರದಲ್ಲಿ ರಶ್ಮಿಕಾ ಪಾತ್ರ ಡಿಫರೆಂಟ್ ಆಗಿದೆ ಎಂಬುದು ಪೋಸ್ಟರ್ ಅರ್ಥ ಮಾಡಿಸುತ್ತದೆ. ತಮ್ಮ ನೆಚ್ಚಿನ ತಾರೆಯ ಈ ಫೋಟೋ ನೋಡಿದ ರಶ್ಮಿಕಾ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಅಲ್ಲದೇ, ಸಿನಿಮಾ ಅಪ್ಡೇಟ್‌ಗಾಗಿ ಕಾತುರದಿಂದ ಕಾಯುತ್ತಿದ್ದಾರೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ