Breaking News

22 ಯೂಟ್ಯೂಬ್ ಚಾನೆಲ್ ಬ್ಯಾನ್ ಮಾಡಿದ ಭಾರತ

Spread the love

ನವದೆಹಲಿ: ಭಾರತ ಸರ್ಕಾರ ಐಟಿ ನಿಯಮ 2021ರ ಅಡಿಯಲ್ಲಿ ಸುಳ್ಳು ಸುದ್ದಿ ಪ್ರಚಾರ ಮಾಡುತ್ತಿದ್ದ 22 ಯೂಟ್ಯೂಬ್ ಚ್ಯಾನೆಲ್‌ಗಳನ್ನು ಬ್ಯಾನ್ ಮಾಡಿದೆ.

ಇದೇ ಮೊದಲ ಬಾರಿಗೆ ಐಟಿ ನಿಯಮ, 2021 ರ ಅಡಿಯಲ್ಲಿ 18 ಭಾರತೀಯ ಯೂಟ್ಯೂಬ್ ನ್ಯೂಸ್ ಚ್ಯಾನೆಲ್‌ಗಳನ್ನು ನಿರ್ಬಂಧಿಸಲಾಗಿದೆ. ಮಾಹಿತಿ ಹಾಗೂ ಪ್ರಸಾರ ಸಚಿವಾಲಯದ ಇತ್ತೀಚಿನ ಕ್ರಮದಲ್ಲಿ ಪಾಕಿಸ್ತಾನ ಮೂಲದ 4 ಯೂಟ್ಯೂಬ್ ನ್ಯೂಸ್ ಚಾನೆಲ್‌ಗಳನ್ನು ಕೂಡಾ ನಿರ್ಬಂಧಿಸಲಾಗಿದೆ.

ಭಾರತೀಯ ಸಶಸ್ತ್ರ ಪಡೆ, ಜಮ್ಮು ಮತ್ತು ಕಾಶ್ಮೀರದಂತಹ ವಿವಿಧ ವಿಷಯಗಳ ಕುರಿತು ನಕಲಿ ಸುದ್ದಿಗಳನ್ನು ಪೋಸ್ಟ್ ಮಾಡಲು ಹಲವಾರು ಯೂಟ್ಯೂಬ್ ಚ್ಯಾನೆಲ್‌ಗಳನ್ನು ಬಳಸಲಾಗಿದೆ. ಇದೀಗ ಹೊಸದಾಗಿ ನಿರ್ಬಂಧಿಸಲಾಗಿರುವ ಯೂಟ್ಯೂಬ್ ಚಾನೆಲ್‌ಗಳಲ್ಲಿ ಬಹುತೇಕ ಭಾರತ ವಿರೋಧಿ ಸುದ್ದಿಗಳನ್ನೇ ಪೋಸ್ಟ್ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ. 


Spread the love

About Laxminews 24x7

Check Also

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

Spread the loveಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ