ನಿಪ್ಪಾಣಿ :ನಿಪ್ಪಾಣಿಯ ಸಮಾಧಿ ಮಠದಲ್ಲಿ, ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ಡಾ. ಶಿವರಾಜ ಪಾಟೀಲ ಅವರು ಸಧೃಡ ಭಾರತ ನಿರ್ಮಾಣದಲ್ಲಿ ಯುವಜನತೆಗೆ ಪಾತ್ರ ಹಾಗೂ ಜೀವನದ ಮೌಲ್ಯಗಳ ಕುರಿತು ಮಾರ್ಗದರ್ಶನ ನೀಡಿದರು. ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಸಾರ್ಥಕ ಸೇವೆ ಸಲ್ಲಿಸಿ ಈಗ ವಿಶ್ರಾಂತ ಜೀವನ ನಡೆಸುತ್ತಿರುವ ಡಾ.ಶಿವರಾಜ ವಿ.ಪಾಟೀಲ ಅವರು ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಲ್ಲಿಸಿದ ಸೇವೆ ಅವಿಸ್ಮರಣೀಯ. ಇವರ ಆದರ್ಶಮಯ ಬದುಕು ಮತ್ತು ಸಮಾಜಮುಖಿ ಕಾರ್ಯಗಳು ಅನೇಕರಿಗೆ ಸ್ಫೂರ್ತಿ.
ಇದೇ ವೇಳೆ ಅವರಿಗೆ ಜೊಲ್ಲೆ ಉದ್ಯೋಗ ಸಮೂಹ ವತಿಯಿಂದ “ಪ್ರೇರಣಾ ಗೌರವ ಪ್ರಶಸ್ತಿ”ಯನ್ನು ವಿಜಯಪುರದ ಜ್ಞಾನಯೋಗಾಶ್ರಮದ ನಡೆದಾಡುವ ದೇವರು, ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ, ಹಾಗೂ ನಿಪ್ಪಾಣಿ ಸಮಾಧಿ ಮಠದ ಶ್ರೀ ಪ್ರಾಣಲಿಂಗ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನೀಡಿ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಗೌರವಿಸಿದರು.
ಈ ಸಂದರ್ಭದಲ್ಲಿ ದಿಗ್ವಿಜಯ ಕಾರ್ಯಕ್ರಮ ನಿರ್ಮಾಪಕರು ಶ್ರೀ ಪ್ರಶಾಂತ ಪ್ರಶಾಂತ ರಿಬ್ಬನಪೇಟ ಗಣ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.