ಧಾರವಾಡ ಜಿಲ್ಲೆಯ ಕಲಘಟಗಿ ಹತ್ತಿರ ಭೀಕರ ಅಪಘಾತ ನಡೆದಿದ್ದು, ಪೊಲೀಸ್ ಸೇರಿದಂತೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಲಘಟಗಿಯ ಚಳಮಟ್ಟಿ ಕ್ರಾಸ್ ಹತ್ತಿರ ಈ ದುರ್ಘಟನೆ ನಡೆದಿದೆ. ಕಲಘಟಗಿ ಪೊಲೀಸ್ ಠಾಣೆಯ ಪಂಡಿತ್ ಕಾಸರ್ ಸೇರಿದಂತೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಅಲ್ಲಿಯೇ ಇದ್ದ ಸ್ಥಳೀಯ ವ್ಯಕ್ತಿಯೊಬ್ಬರು ಕೂಡ ಈ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಟಿಪ್ಪರ್ ಲಾರಿಯೊಂದು ಪೊಲೀಸರಿಗೆ ಹಿಟ್ ಆಂಡ್ ರನ್ ಮಾಡಿ ಪರಾರಿಯಾಗಿದೆ. ಧಾರವಾಡ ಜಿಲ್ಲಾ ವರಿಷ್ಠಾಧಿಕಾರಿ ಕೃಷ್ಣಕಾಂತ್ ಹುಬ್ಬಳ್ಳಿಯ ಕಿಮ್ಸ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ