Breaking News

ರಮೇಶ್ ಜಾರಕಿಹೊಳಿ ಮತ್ತೆ ಸಂಪುಟ ಸೇರ್ಪಡೆಯಾಗುವುದು ಖಚಿತ, ಗ್ರಾಮೀಣಾಭಿವೃದ್ದಿ ಖಾತೆ ನೀಡುವ ಬಗ್ಗೆ ಚರ್ಚೆ

Spread the love

ಬೆಂಗಳೂರು, ಏ. 07:

ಜಾರಕಿಹೊಳಿಯೂ ಸಂಪುಟಕ್ಕೆ?:

 ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬೆಳಗಾವಿ ಭಾಗದ ಪ್ರಭಾವಿ ರಮೇಶ್ ಜಾರಕಿಹೊಳಿ ಮತ್ತೆ ಸಂಪುಟ ಸೇರ್ಪಡೆಯಾಗುವುದು ಖಚಿತವಾಗುತ್ತಿದೆ. ಜಾರಕಿಹೊಳಿ ಅವರಿಗೆ ಗ್ರಾಮೀಣಾಭಿವೃದ್ದಿ ಖಾತೆ ನೀಡುವ ಬಗ್ಗೆ ಚರ್ಚೆಯಾಗಿದ್ದು, ಸದ್ಯ ಆರ್‌ಡಿಪಿಆರ್ ಸಚಿವರಾಗಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಟ್ಟು ಪಕ್ಷ ಸಂಘಟನೆಗೆ ತೊಡಗಿಸುವ ಸಾಧ್ಯತೆ ಇದೆ.

 

ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಗೃಹ ಸಚಿವರ ಅವರ ತಲೆದಂಡವಾಗುವ ಸಾಧ್ಯತೆ ಕಾಣುತ್ತಿದೆ.

ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್, ಹಲಾಲ್, ಮಸೀದಿಗಳಲ್ಲಿ ಧ್ವನಿವರ್ಧಕ ಒಂದಲ್ಲಾ ಒಂದು ಕೋಮು ವಿಚಾರಗಳು ಸರ್ಕಾರಕ್ಕೆ ತಲೆನೋವಾಗುತ್ತಿವೆ.

ವಿರೋಧ ಪಕ್ಷಗಳು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಅಸಮರ್ಥರಾಗಿದ್ದಾರೆ. ಕೂಡಲೇ ರಾಜೀನಾಮೆ ನೀಡಬೇಕು ಎಂದು ನಿತ್ಯವೂ ಒತ್ತಾಯಿಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತಲೆದಂಡವಾಗುತ್ತದೆ ಎಂಬ ಸುದ್ದಿ ಬುಧವಾರ ಸಂಜೆಯಿಂದ ಹರಿದಾಡುತ್ತಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ರಾಜ್ಯ ಸಚಿವ ಸಂಪುಟದ ವಿಸ್ತರಣೆ ಮತ್ತು ಪುನಾರಚನೆಗೆ ಕೇಂದ್ರ ನಾಯಕರ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ. ಈ ಮಧ್ಯೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಗೃಹ ಖಾತೆಯಿಂದ ಬಿಡುಗಡೆಗೊಳಿಸುವ ಬಗ್ಗೆ ಚರ್ಚೆಯಾಗುತ್ತಿದೆ ಎನ್ನಲಾಗಿದೆ.

ಆರಗ ಜ್ಞಾನೇಂದ್ರ ಅವರಿಂದ ಕಿತ್ತುಕೊಳ್ಳುವ ಗೃಹ ಖಾತೆಯನ್ನು ಮತ್ತೊಬ್ಬ ಕರಾವಳಿ ಭಾಗದ ಯುವ ಸಚಿವ ವಿ. ಸುನೀಲ್ ಕುಮಾರ್ ಅವರಿಗೆ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ. 

 

ಇನ್ನು ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎನ್‌. ಮಹೇಶ್, ಸತೀಶ್ ರೆಡ್ಡಿ, ಜಿ.ಎಚ್. ತಿಪ್ಪಾರಡ್ಡಿ, ಶಿವನಗೌಡನಾಯಕ ಅವರೂ ಸಹ ಸಂಪುಟ ಸೇರ್ಪಡೆಯಾಗುವುದು ಬಹುತೇಕ ಖಚಿತ 


Spread the love

About Laxminews 24x7

Check Also

ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಅಧ್ಯಕ್ಷ ರವಿಕುಮಾರ್‌ ಕೊನೆಗೂ ರಾಜೀನಾಮೆ

Spread the loveಬೆಂಗಳೂರು, (ಸೆಪ್ಟೆಂಬರ್ 05): ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (Bhovi Development Corporation) ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ