ವಿಜಯಪುರ: ಕಾಂಗ್ರೆಸ್ ಮುಕ್ತ ಭಾರತ ಮಾಡೋಕೆ ಯಾರಪ್ಪನ ಕೈಯಲ್ಲೂ ಆಗುವುದಿಲ್ಲ ಎಂದು ಯೂಥ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ್ ತಿಳಿಸಿದರು.
ಬೆಲೆ ಏರಿಕೆ ಖಂಡಿಸಿ ವಿಜಯಪುರದಲ್ಲಿ ಯುಥ್ ಕಾಂಗ್ರೆಸ್‍ನಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದೆ. ಕಾಂಗ್ರೆಸ್ ಪಕ್ಷದ ಇತಿಹಾಸ ಈ ದೇಶದ ಇತಿಹಾಸ. ಆ ಇತಿಹಾಸವನ್ನು ಯಾರ ಕೈಯಲ್ಲೂ ಬದಲಾಯಿಸೋಕೆ ಆಗಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ಸ್ವಾತಂತ್ರ್ಯ ಹೋರಾಟ ಮಾಡುವಾಗ ಯಾವ ಬಿಜೆಪಿ, ಆರ್‌ಎಸ್‍ಎಸ್, ಎಎಪಿಯೂ ಇರಲಿಲ್ಲ. ಬರೀ ಕಾಂಗ್ರೆಸ್ ಪಕ್ಷವೊಂದೇ ಇತ್ತು. ನಮ್ಮ ನಿಮ್ಮ ಪರವಾಗಿ ಹೋರಾಡಿ ಸ್ವಾತಂತ್ರ್ಯ ತಂದು ಕೊಟ್ಟಿದೆ. ಹಾಗಾಗಿ ಕಾಂಗ್ರೆಸ್ ಮುಕ್ತ ಭಾರತ ಮಾಡೋಕೆ ಯಾರಪ್ಪನ ಕೈಯಲ್ಲಿ ಆಗೋಲ್ಲ ಎಂದರು