Breaking News

ನಮಗೆ ಸ್ವಂತ ಮನೆ, ರೇಷನ್ ಕಾರ್ಡ್, ಆಧಾರ್ ಕಾರ್ಡ್ ಯಾವುದೂ ಇಲ್ಲ: ಸಚಿವ ಕತ್ತಿ ಮುಂದೆ ಕಣ್ಣೀರಿಟ್ಟ ಮಹಿಳೆ

Spread the love

ಮಡಿಕೇರಿ(ಕೊಡಗು): ನಮಗೆ ಮನಗೆ ಸ್ವಂತ ಮನೆ ಇಲ್ಲ. ರೇಷನ್ ಕಾರ್ಡ್, ಆಧಾರ್ ಕಾರ್ಡ್ ಕೂಡ ಇಲ್ಲ. ಕೂಲಿ ‌ಕೆಲಸ ಮಾಡಿ ನಮ್ಮನ್ನು ಸಾಕುತ್ತಿದ್ದ ಗಂಡ ಕೂಡ ಹುಲಿ ದಾಳಿಗೆ ಬಲಿಯಾಗಿದ್ದಾರೆ. ಇಬ್ಬರು ಮಕ್ಕಳಿದ್ದು ಮನೆಯಲ್ಲಿ ಊಟಕ್ಕೆ ಗತಿ ಇಲ್ಲ ಎಂದು ಕೊಡಗಿನಲ್ಲಿ ಹುಲಿ ದಾಳಿಗೆ ಬಲಿಯಾದ ವ್ಯಕ್ತಿಯ ಪತ್ನಿ, ಆರಣ್ಯ ಇಲಾಖೆ ಸಚಿವ ಉಮೇಶ್ ಕತ್ತಿ ಮುಂದೆ ಕಣ್ಣೀರಿಟ್ಟಿದ್ದಾರೆ.

ಕೊಡಗು ಜಿಲ್ಲೆಯ ವೀರಾಜ್​ಪೇಟೆ ತಾಲೂಕಿನ ರುದ್ರಗುಪ್ಪೆ ಗ್ರಾಮದಲ್ಲಿ ನರಭಕ್ಷಕ ಹುಲಿಯ ಅಟ್ಟಹಾಸಕ್ಕೆ 28 ವರ್ಷದ ಕಾರ್ಮಿಕ ಗಣೇಶ್ ಬಲಿಯಾಗಿದ್ದರು. ಪರಿಣಾಮ ಇಡೀ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದೆ. ಹುಲಿ ದಾಳಿಗೆ ಬಲಿಯಾದ ಕುಟುಂಬಕ್ಕೆ ಸಚಿವರು 5 ಲಕ್ಷ ರೂ. ಚೆಕ್ ವಿತರಣೆ ಮಾಡಿದ್ದಾರೆ. ಆದ್ರೆ, ಚೆಕ್​ನಿಂದ ಹಣ ಪಡೆಯಲು ನನ್ನ ಬಳಿ ಅಕೌಂಟ್ ಇಲ್ಲ. ಆಧಾರ್ ಕಾರ್ಡ್ ಹಾಗೂ ಇರಲು ಸ್ವಂತ ಮನೆಯಿಲ್ಲ. ನನಗೆ ಇಬ್ಬರು ಮಕ್ಕಳು ಇದ್ದಾರೆ ಅವರ ಗತಿ ಏನು?, ನಮ್ಮ ಕಷ್ಟ ಕೇಳಲು ಯಾರು ಬರುತ್ತಿಲ್ಲ ಎಂದು ಮಹಿಳೆ ಸಚಿವರ ಮುಂದೆ ಕಣ್ಣೀರು ಹಾಕಿದ್ದಾರೆ.

ಮಹಿಳೆಯ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ನಿಮ್ಮ ಕಷ್ಟಗಳನ್ನು ಬಗೆಹರಿಸುವ ಪ್ರಯತ್ನ ಮಾಡಲಾಗುವುದು. ಸೂಕ್ತ ಪರಿಹಾರ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ