ಬೆಳಗಾವಿ: ಇಲ್ಲಿಯೂ ನಿಮಗೆ ಬೇರೆ ದೇಶದ ನೋಟುಗಳು ಹಾಗೂ ಶಸ್ತ್ರಾಸ್ತ್ರಗಳು ಸಿಗುತ್ತವೆ ಎಂದು ಶಾಸಕ ಅಭಯ್ ಪಾಟೀಲ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿಯಲ್ಲಿ ಪತ್ತೆಯಾದ ಪಾಕಿಸ್ತಾನ ನೋಟು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಪಾಟೀಲ್, ನಾನು ಸೀರಿಯಸ್ ಆಗಿ ಹೇಳುತ್ತಿದ್ದೇನೆ. ಬೆಳಗಾವಿಯಲ್ಲಿರುವ ಕೆಲವು ಪ್ರದೇಶಗಳನ್ನು ಪರಿಶೀಲಿಸಿದರೆ ಇಲ್ಲಿಯೂ ನಿಮಗೆ ಬೇರೆ ದೇಶದ ನೋಟುಗಳು ಸಿಗುತ್ತವೆ. ಶಸ್ತ್ರಾಸ್ತ್ರಗಳು ಕೂಡ ಸಿಗುತ್ತವೆ ಎಂದು ಗಂಭೀರ ಆರೋಪ ಮಾಡಿದರು.ಬೆಳಗಾವಿಯಲ್ಲಿರುವ ಪೊಲೀಸ್ ಡಿಪಾರ್ಟ್‍ಮೆಂಟ್ ಇನ್ನೂ ಅಷ್ಟೊಂದು ಕಾರ್ಯರೂಪಕ್ಕೆ ಬಂದಿಲ್ಲ. ಮುಂದಿನ ದಿನಗಳಲ್ಲಿ ಸರಿಯಾಗಿ ದಾರಿಗೆ ತರುವಂತಹ ಪೊಲೀಸ್ ಇಲಾಖೆ ಮಾಡಬೇಕಾಗುತ್ತದೆ. ಬೆಳಗಾವಿಯಲ್ಲಿಯೂ ಸ್ಫೋಟಕ ಪರಿಸ್ಥಿತಿ ಇದೆ ಎಂದು ತಿಳಿಸಿದರು