ಏಪ್ರಿಲ್ 22 ರಿಂದ 18ರವರೆಗೆ ನಡೆಯಲಿರುವ ದ್ವಿತೀಯ ಪಿಯೂಸಿ ಪರೀಕ್ಷೆಗೆ (2nd PU Exam) ಹಿಜಾಬ್ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ಒದಗಿಸುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ. ಈಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ (Hijab Ban) ಬಂದ್ರೆ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋ ಎಂಟ್ರಿ ಎಂದು ಖಚಿತಪಡಿಸಿದೆ.
ಈಮೂಲಕ SSLC ಪರೀಕ್ಷೆ ಮಾದರಿಯಲ್ಲೇ ದ್ವಿತೀಯ ಪಿಯು ಪರೀಕ್ಷೆಯನ್ನು (Exam) ನಡೆಸುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಪರೀಕ್ಷೆಗೂ ಕೆಲವೇ ದಿನಗಳ ಮುನ್ನ ಖಚಿತಪಡಿಸಿದೆ.
ಸಮವಸ್ತ್ರ ಇರುವ ಕಾಲೇಜುಗಳಲ್ಲಿ ಪಾಲನೆ ಕಡ್ಡಾಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಲಾಗಿದೆ. ಕಾಲೇಜು ಅಭಿವೃದ್ಧಿ ಸಮಿತಿ (CDC) ಅಥವಾ ಆಡಳಿತ ಮಂಡಳಿಯ ಮೇಲ್ವಿಚಾರಣ ಸಮಿತಿ ನಿರ್ಧರಿಸಿರುವ ಸಮವಸ್ತ್ರ ಪಾಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.