Breaking News

ಚೌಕಿದಾರ್ ಚೋರ್ ಹೇ ಘೋಷಣೆ ಮೊಳಗಿಸಿ ಸೇನೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜನ

Spread the love

ಪಾಕಿಸ್ತಾನದ ಪ್ರಧಾನಿಯಾಗಿದ್ದ ಇಮ್ರಾನ್ ಖಾನ್ ಅಧಿಕಾರ ಕಳೆದುಕೊಳ್ಳಲು ಸೇನೆಯೇ ಮುಖ್ಯ ಕಾರಣ ಎಂದು ಅಲ್ಲಿನ ಜನರು ನಂಬಿದ್ದಾರೆ.ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಭಾನುವಾರ ತೆಹ್ರೀಕ್-ಎ-ಇನ್​ಸಾಫ್ (ಪಿಟಿಐ) ಪಕ್ಷ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಜನರು ‘ಚೌಕಿದಾರ್ ಚೋರ್ ಹೇ’ ಘೋಷಣೆ ಮೊಳಗಿಸಿ ಸೇನೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಘೋಷಣೆಯನ್ನು ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಳಕೆ ಮಾಡಿದ್ದರು. ಪಾಕಿಸ್ತಾನದ ಪ್ರಧಾನಿಯಾಗಿದ್ದ ಇಮ್ರಾನ್ ಖಾನ್ ಅಧಿಕಾರ ಕಳೆದುಕೊಳ್ಳಲು ಸೇನೆಯೇ ಮುಖ್ಯ ಕಾರಣ ಎಂದು ಅಲ್ಲಿನ ಜನರು ನಂಬಿದ್ದಾರೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಲಾಲ್ ಹವೇಲಿಯಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಜನಜಂಗುಳಿಯು ಪಾಕಿಸ್ತಾನದ ಸೇನೆಯನ್ನು ಚೌಕಿದಾರ (ದ್ವಾರಪಾಲಕ) ಎಂದು ಹೋಲಿಸಿ, ಅವನು ಚೋರ್ (ಕಳ್ಳ) ಎಂದು ಆರೋಪಿಸಿತು. ಸಮಾವೇಶದಲ್ಲಿ ಮಾತನಾಡಿದ ಪಾಕಿಸ್ತಾನದ ಅಂತರಿಕ ವ್ಯವಹಾರಗಳ ಇಲಾಖೆಯ ಮಾಜಿ ಸಚಿವ ಶೇಖ್ ರಶೀದ್, ‘ಸಶಸ್ತ್ರ ಪಡೆಗಳ ವಿರುದ್ಧ ಘೋಷಣೆ ಕೂಗಬೇಡಿ’ ಎಂದು ವಿನಂತಿಸಿದರು. ‘ಘೋಷಣೆ ಕೂಗಬೇಡಿ, ನಾವು ಶಾಂತಿಯುತವಾಗಿ ಹೋರಾಡೋಣ’ ಎಂದು ಮನವಿ ಮಾಡಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ