ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕಾವೇರಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಎಬಿವಿಪಿ ಸದಸ್ಯರು ಹಾಸ್ಟೆಲ್‌ನಲ್ಲಿ ಮಾಂಸಾಹಾರ ಸೇವಿಸದಂತೆ ವಿದ್ಯಾರ್ಥಿಗಳನ್ನು ತಡೆದು ಹಿಂಸಾತ್ಮಕ ವಾತಾ ವರಣ ಸೃಷ್ಟಿಸಿದ್ದಾರೆ ಎಂದು ವಿ.ವಿ.ಯವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಆರೋಪಿಸಿದೆ. ಆದರೆ ಎಬಿವಿಪಿ ಈ ಆರೋಪವನ್ನು ನಿರಾಕರಿಸಿದೆ.
ರಾಮನವಮಿ ನಿಮಿತ್ತ ಹಾಸ್ಟೆಲ್‌ನಲ್ಲಿ ಏರ್ಪಡಿಸಿದ್ದ ಪೂಜೆಗೆ ಎಡ ಪಂಥೀಯರು ಅಡ್ಡಿಪಡಿಸಿದ್ದಾರೆ ಎಂದು ಆಪಾದಿಸಿದೆ.
‘ಎರಡೂ ಗುಂಪಿನವರು ಪರಸ್ಪರ ಕಲ್ಲು ತೂರಾಟ ನಡೆಸಿದರು. ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ’ ಉಪ ಪೊಲೀಸ್ ಆಯುಕ್ತ (ನೈಋತ್ಯ) ಮನೋಜ್ ಸಿ. ತಿಳಿಸಿದ್ದಾರೆ.