ರಾಮನಗರ: ಬಿಜೆಪಿ ಬಂದ ನಂತರ ಕೊಲೆಗಳು ಹೆಚ್ಚಾಗಿವೆ. ತಲೆ ಒಡೆಯುವ ವಾತಾವರಣ ಸೃಷ್ಟಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಕೇತಗಾನಹಳ್ಳಿಯ ತೋಟದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀವು ತಲೆ ಒಡೆಯುತ್ತಿರಿ, ನಾವು ಕನಿಕರ ವ್ಯಕ್ತ ಪಡಿಸುತ್ತಲೇ ಇರುತ್ತೇವೆ ಎಂದು ಆಕ್ರೋಶ ಹೊರಹಾಕಿದರು.
ಜಮೀರ್ ಅಹಮದ್, ಚಲುವರಾಯ ಸ್ವಾಮಿ, ಬಾಲಕೃಷ್ಣ ಮತ್ತೆ ಜೆಡಿಎಸ್ ಪಕ್ಷಕ್ಕೆ ವಾಪಸ್ ಬಂದರೆ ಕರೆದುಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರ ಪಕ್ಷದ ಮುಂದೆ ಇಲ್ಲ. ಕೆಲವರನ್ನು ಪಕ್ಷಕ್ಕೆ ವಾಪಸ್ಸು ಕರೆದುಕೊಳ್ಳದಂತೆ ಪಕ್ಷದ ಕಾರ್ಯಕರ್ತರೇ ಒತ್ತಡ ಹೇರುತ್ತಿದ್ದಾರೆ
Laxmi News 24×7