Breaking News

ಮದುವೆ ಸಂಭ್ರಮ ಕಸಿದುಕೊಂಡ ಅಕಾಲಿಕ ಮಳೆ – ತಂದೆ ಆಸ್ಪತ್ರೆಯಲ್ಲಿ, ಮಗಳು ಮನೆಯಲ್ಲಿ ಕಣ್ಣೀರು

Spread the love

ಬೆಳಗಾವಿ: ಕಳೆದ ಮೂರುನಾಲ್ಕು ದಿನಗಳಿಂದ ಕುಂದಾನಗರಿಯಲ್ಲಿ ಸುರಿಯುತ್ತಿರೋ ಅಕಾಲಿಕ ಮಳೆಯಿಂದಾಗಿ ಮಗಳ ಮದುವೆಯ ಸಂಭ್ರಮ ಕಸಿದುಕೊಂಡಿದೆ.

ಬೆಳಗಾವಿ ತಾಲೂಕಿನ ಅಲಾರವಾಡ ಗ್ರಾಮದ ಆಶ್ರಯ ಕಾಲೋನಿಯಲ್ಲಿ ಸುರಿದ ಬಾರಿ ಮಳೆ, ಗಾಳಿಗೆ ಚಂದ್ರಶೇಖರ್ ಹುಡೇದ್ ಅವರ ಮನೆ ಸೇರಿ ಐದಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿ ಕುಸಿದಿವೆ. ಈ ಪರಿಣಾಮ, ಏಪ್ರಿಲ್ 15ಕ್ಕೆ ಅದ್ಧೂರಿಯಾಗಿ ಮಗಳ ಮದುವೆಯನ್ನು ನಿಶ್ಚಯ ಮಾಡಿಕೊಂಡಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತ ಮದುವೆ ಸಂಭ್ರಮದಲ್ಲಿ ಇರಬೇಕಿದ್ದ ಮದುಮಗಳು ಕೂಡ ತಂದೆಯ ಮತ್ತು ಮನೆಯ ಪರಿಸ್ಥಿತಿ ಕಂಡು ಕಣ್ಣೀರು ಹಾಕುತ್ತಿದ್ದಾಳೆ. ಮಳೆಯಿಂದಾಗಿ ಐದಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಚಂದ್ರಶೇಖರ್ ಅವರ ಮನೆಯಲ್ಲಿ ಎಲ್ಲರೂ ಕುಳಿತು ಊಟ ಮಾಡುತ್ತಿದ್ದ ವೇಳೆಯಲ್ಲಿಯೇ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಘಟನೆಯಿಂದಾಗಿ ಅವರ ಬೆನ್ನು ಮತ್ತು ಕಾಲಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಅವರು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ