Breaking News

ಕೇಂದ್ರೀಯ ವಿ.ವಿಯಲ್ಲಿ ರಾಮನವಮಿ ಸಂಘರ್ಷ: ವಿದ್ಯಾರ್ಥಿಗಳ ಮೇಲೆ ಹಲ್ಲೆ

Spread the love

ಕಲಬುರಗಿ: ಜಿಲ್ಲೆಯ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಭಾನುವಾರ ಸಂಜೆ ವಿದ್ಯಾರ್ಥಿಗಳ ಮಧ್ಯೆ ಗಲಾಟೆ ನಡೆದಿದ್ದು, ಜೇವರ್ಗಿ ತಾಲ್ಲೂಕು ಶಖಾಪುರ ಗ್ರಾಮದ ವಿಶ್ವನಾಥ ದಿವಾಣ ಮತ್ತು ರಾಜಸ್ಥಾನದ ನರೇಂದ್ರಕುಮಾರ್ ಧರಿಯಾ ಎಂಬ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

 

‘ವಿಶ್ವವಿದ್ಯಾಲಯದ ಆವರಣದಲ್ಲಿರುವ ಲಕ್ಷ್ಮಿ ಮಂದಿರದಲ್ಲಿ ನಾವು ರಾಮನವಮಿ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಿದೆವು. ಈ ಕಾರಣಕ್ಕಾಗಿಯೇ ಎಡಪಂಥೀಯ ವಿಚಾರಧಾರೆಯ ವಿದ್ಯಾರ್ಥಿಗಳು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ಗಾಯಗೊಂಡಿರುವ ವಿಶ್ವನಾಥ ಆರೋಪಿಸಿದ್ದಾರೆ.

‘ಗೂಂಡಾಗಿರಿ ಪ್ರದರ್ಶಿಸಿದ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ವಿ.ವಿ ಯಲ್ಲಿ ಹೆಚ್ಚಿ
ರುವ ಎಡಪಂಥೀಯ ಚಟುವಟಿಕೆಗೆ ಕಡಿವಾಣ ಹಾಕಬೇಕು’ ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನವರು ವಿ.ವಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ‘ದಲಿತ ವಿದ್ಯಾರ್ಥಿಯ ಮೇಲೆ ದಾಖಲಿಸಿರುವ ಸುಳ್ಳು ಪ್ರಕರಣ ಕೈಬಿಡಬೇಕು’ ಎಂದು ಆಗ್ರಹಿಸಿ ದಲಿತ ಸಂಘಟನೆಯವರು ಪ್ರತಿಯಾಗಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ ವಿಶ್ವವಿದ್ಯಾಲಯ ಆವರಣದಲ್ಲಿ ಇಡೀ ದಿನ ತ್ವೇಷಮಯ ವಾತಾವರಣ ನಿರ್ಮಾಣವಾಗಿತ್ತು.

‘ವಿದ್ಯಾರ್ಥಿಗಳ ಮಧ್ಯೆ ಗಲಾಟೆ ನಡೆದಿದೆ. ಸಾದಿಕ್‌, ರಾಹುಲ್‌, ರಾಹುಲ್‌ ಆರ್ಯ ಹಾಗೂ ಇನ್ನಿಬ್ಬರ (ಹೆಸರು ಉಲ್ಲೇಖಿಸಿಲ್ಲ) ವಿರುದ್ಧ ನರೋಣಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಇಶಾ ಪಂತ್‌ ಪ್ರತಿಕ್ರಿಯಿಸಿದರು. ಕೊಲೆ ಯತ್ನ ಸೇರಿದಂತೆ ಹಲವು ಪ್ರಕರಣಗಳ ಅಡಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮದ್ಯದಂಗಡಿ ನವೀಕರಣ ಶುಲ್ಕ ಶೇ.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರದ ಆದೇಶ

Spread the loveಬೆಂಗಳೂರು: ಮದ್ಯದಂಗಡಿ ಮಾಲೀಕರ ವಿರೋಧದ ಹಿನ್ನೆಲೆ ಪರವಾನಗಿ ನವೀಕರಣ ಶುಲ್ಕ ಶೇ.50 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಅಂತಿಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ