Breaking News

ತಿಂಗಳ ಹಿಂದಷ್ಟೇ ಜನಿಸಿದ್ದ ಮುದ್ದು ಮಗುವಿಗೆ ತಂದೆಯಾಗಿದ್ದ ಪೊಲೀಸ್​ ಪೇದೆ ಬಾಳಲ್ಲಿ ದುರಂತ

Spread the love

ಚಾಮರಾಜನಗರ: ಅವರ ವಯಸ್ಸಿನ್ನೂ 34 ವರ್ಷ. ಪೊಲೀಸ್ ಇಲಾಖೆಯಲ್ಲಿ ಪೇದೆಯಾಗಿ ಕೆಲಸ ಮಾಡಿಕೊಂಡೇ ಪಿಎಸ್​ಐ ಆಗುವ ಗುರಿ ಇಟ್ಟುಕೊಂಡು ನಿರಂತರ ಅಭ್ಯಾಸ ಮಾಡಿತ್ತಿದ್ದರು. ಇವರ ಸಾಧನೆಗೆ ಸಾಥ್ ಕೊಡುವ ಮಡದಿ ಹಾಗೂ ಒಂದು ತಿಂಗಳ ಹಿಂದಷ್ಟೇ ಹುಟ್ಟಿದ ಗಂಡು ಮಗುವಿನೊಂದಿಗೆ ಸುಖಿ ಜೀವನ ನಡೆಸುತ್ತಿದ್ದರು.

ಎಲ್ಲವೂ ಅಂದುಕೊಂಡಂತೆ ಆಗುತ್ತಿದೆ ಎಂದುಕೊಂಡವನ ಬಾಳನಲ್ಲಿ ವಿಧಿ ಬೇರೆಯೇ ಆಟವಾಡಿದೆ. ಕೆಲಸ ನಿರ್ವಹಿಸುತ್ತಲೇ ಬಾರದ ಲೋಕಕ್ಕೆ ಹೋಗಿಬಿಟ್ಟಿದ್ದಾರೆ.

ಸಂತೇಮರಹಳ್ಳಿ ಪೊಲೀಸ್ ಠಾಣೆ ಕಾನ್​ಸ್ಟೇಬಲ್ ಪ್ರಸಾದ್(34) ಸೋಮವಾರ ರಾತ್ರಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲೂಕಿನ ಇರಸವಾಡಿಯಲ್ಲಿ ಪತ್ನಿ-ಮಗು ಜತೆ ಪ್ರಸಾದ್ ವಾಸವಿದ್ದರು., ಕರ್ತವ್ಯ ನಿಮಿತ್ತ ಕೆಂಪನಪುರಕ್ಕೆ‌ ಎಎಸ್​ಐ ರಾಜು ಮತ್ತು ಪ್ರಸಾದ್​ ಬೈಕ್​ನಲ್ಲಿ ಹೋಗಿದ್ದರು. ಈ ವೇಳೆ ಕಾರು ಡಿಕ್ಕಿ ಹೊಡೆದಿದೆ. ಪ್ರಸಾದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಸಾದ್ ಜತೆ ಬೈಕ್​ನಲ್ಲಿ ಹಿಂದೆ ಕುಳಿತ್ತಿದ್ದ ಎಎಸ್‌ಐ ರಾಜು ಸ್ಥಿತಿ ಗಂಭೀರವಾಗಿದ್ದು, ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರಿನ ಮಾಲೀಕನಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಸಂತೇಮರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಸಾದ್​ ಕೆಲ ವರ್ಷದ ಹಿಂದೆ ನಾಗವಳ್ಳಿ ಗ್ರಾಮದ ಯುವತಿಯನ್ನು ವಿವಾಹವಾಗಿದ್ದರು. ದಂಪತಿಗೆ ಒಂದು ತಿಂಗಳ ಮಗು ಇದೆ. ಪ್ರಸಾದ್​ ಸಾವಿಂದ ಕುಟುಂಬ ಕಂಗೆಟ್ಟಿದೆ.


Spread the love

About Laxminews 24x7

Check Also

ಅನಾರೋಗ್ಯದಿಂದ ತಾಯಮ್ಮ ಹುಲಿ ಸಾವು

Spread the loveಮೈಸೂರು: ಚಾಮರಾಜೇಂದ್ರ ಮೃಗಾಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಹುಲಿ ತಾಯಮ್ಮ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮುಂಜಾನೆ 3.45ರ ಸಮಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ