Breaking News

ಈಶ್ವರಪ್ಪ ವಿರುದ್ಧ ಕಮಿಷನ್​ ಆರೋಪ ಮಾಡಿದ್ದ ಗುತ್ತಿಗೆದಾರ.. ಬೆಳಗಾವಿಯ ಸಂತೋಷ್​ ಪಾಟೀಲ್​ ಆತ್ಮಹತ್ಯೆ

Spread the love

ಬೆಳಗಾವಿ/ಉಡುಪಿ: ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ.40 ರಷ್ಟು ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ವಾಟ್ಸಪ್​ನಲ್ಲಿ ಡೆತ್ ನೋಟ್ ಕಳಿಸಿ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿಯ ಲಾಡ್ಜ್​ನಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ ನೇಣು ಹಾಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಉಡುಪಿ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ತಾಲೂಕಿನ ಬಡಸ್ ಗ್ರಾಮದ ಸಂತೋಷ್​ ಪಾಟೀಲ್​ ಸದ್ಯ ವಿಜಯ ನಗರದಲ್ಲಿ ವಾಸವಾಗಿದ್ದರು‌. ಬಿಜೆಪಿ ಸದಸ್ಯರೂ ಆಗಿರುವ ಇವರು ಕೆ.ಎಸ್. ಈಶ್ವರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಈಶ್ವರಪ್ಪನವರ ಮೌಖಿಕ ಆದೇಶದ ಮೇರೆಗೆ ಸಂತೋಷ ಹಿಂಡಲಗಾ ಗ್ರಾಮದಲ್ಲಿ 4 ಕೋಟಿ ರೂಪಾಯಿ ವೆಚ್ಚದಲ್ಲಿ 108 ಕಾಮಗಾರಿ ನೆರವೇರಿಸಿದ್ದರು. ಇದರ ಬಿಲ್ ಪಡೆಯಲು ಈಶ್ವರಪ್ಪ ಶೇ.40 ಕಮಿಷನ್ ಕೇಳುತ್ತಿರುವ ಬಗ್ಗೆ ಸಂತೋಷ ಆರೋಪ ಮಾಡಿದ್ದರು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಈ ಬಗ್ಗೆ ದೂರು ಸಲ್ಲಿಸಿದ್ದರು. ಬಳಿಕ ಈಶ್ವರಪ್ಪ ಅವರು ಸಂತೋಷ ವಿರುದ್ಧವೇ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಡೆತ್‌ನೋಟ್‌ನಲ್ಲಿ ಏನಿದೆ?: ‘ನನ್ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಕಾರಣ. ಇವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ, ಮಗುವಿಗೆ ಸರ್ಕಾರ ಅಂದರೆ ಪ್ರಧಾನಿ ಹಾಗೂ ಮುಖ್ಯಮಂತ್ರಿಗಳು ಮತ್ತು ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಸಹಾಯಹಸ್ತ ನೀಡಬೇಕೆಂದು ಕೈಮುಗಿದು ಕೇಳಿಕೋಳುತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು. ನನ್ನ ಜೊತೆ ಬಂದ ನನ್ನ ಗೆಳೆಯರಾದ ಸಂತೋಷ ಮತ್ತು ಪ್ರಶಾಂತಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕರೆದುಕೊಂಡ ಬಂದಿರುತ್ತೇನೆ ಅಷ್ಟೇ. ಅವರಿಗೂ ಮತ್ತು ನನ್ನ ಸಾವಿಗೂ ಯಾವುದೇ


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ