ಮೈಸೂರು: ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಪಟ್ಟು ಹಿಡಿದಿದೆ.
ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಈಶ್ವರಪ್ಪ, ‘ಸಂತೋಷ್ ಯಾರು ಎಂದೇ ನನಗೆ ಗೊತ್ತಿಲ್ಲ. ನಾನು ರಾಜೀನಾಮೆ ನೀಡುವುದಿಲ್ಲ’ ಎಂದಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, “ಇದರಲ್ಲಿ ನನ್ನ ಪಾತ್ರ ಇಲ್ಲ. ಆತ ಯಾರೆಂಬುದೇ ನನಗೆ ಗೊತ್ತಿಲ್ಲ” ಎಂದರು.
Laxmi News 24×7