ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರದಲ್ಲಿ ಪಾರದರ್ಶಕವಾದ ತನಿಖೆಯನ್ನು ನಡೆಸುತ್ತೇವೆ. ತನಿಖೆಯ ಆಧಾರದಲ್ಲಿ ಮುಂದೆ ಏನು ಎಂಬುವುದನ್ನು ಚರ್ಚಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರದ ಬಗ್ಗೆ ಸಂಪೂರ್ಣ ವಿಚಾರಣೆ ಮಾಡುತ್ತೇವೆ. ಸಂತೋಷ್ ಪಾಟೀಲ್ ದೇಹ ಉಡುಪಿಯ ಲಾಡ್ಜ್ ನಲ್ಲಿ ಪತ್ತೆಯಾಗಿದೆ. ಖುದ್ದು ಎಸ್.ಪಿ ಸ್ಥಳಕ್ಕೆ ಹೋಗಿದ್ದಾರೆ ಪ್ರಾಥಮಿಕ ತನಿಖೆ ಈಗಷ್ಟೇ ನಡೆಯುತ್ತಿದೆ. ಪ್ರಾಥಮಿಕ ವರದಿ ಬಂದ ಬಳಿಕ ಏನು ಅಂತಾ ನಿರ್ಧರಿಸುತ್ತೇವೆ ಎಂದು ಹೇಳಿದರು.
Laxmi News 24×7