ಬೆಂಗಳೂರು: ರೌಡಿಶೀಟರ್ನ ಉಪಟಳ ಹೆಚ್ಚಾದ ಹಿನ್ನೆಲೆಯಲ್ಲಿ ನಗರದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸ್ ಪಿಸ್ತೂಲ್ ಸದ್ದು ಮಾಡಿದೆ. ವಿವಿಧ ಅಪರಾಧ ಪ್ರಕರಣಗಳಲ್ಲಿ ಬೇಕಾಗಿದ್ದ, ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಸಂಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಾಲರಾಜು ಗುಂಡು ಹಾರಿಸಿದ್ದಾರೆ.
ಸಂಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಾಲರಾಜು, ರೌಡಿ ಶೀರ್ ಶರಣಪ್ಪ ಕಾಳಿಗೆ ಗುಂಡು ಹಾರಿಸಿದ್ದಾರೆ. ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಶರಣಪ್ಪ ಪೊಲೀಸರಿಗೆ ಸಿಗದೆ ತಲೆ ಮರೆಸಿಕೊಂಡಿದ್ದ. ಆರೋಪಿ ತಲೆಮರೆಸಿಕೊಂಡ ಬಗ್ಗೆ ಮಾಹಿತಿ ಪಡೆದ ಸಂಜಯ್ ನಗರ ಪೊಲೀಸರು ಬಂಧನಕ್ಕೆ ತೆರಳಿದ್ದ ವೇಳೆ ಆರೋಪಿ ಕಾನ್ಸ್ಟೇಬಲ್ ಮಲ್ಲಪ್ಪ ಅವರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಮುಂದಾಗಿದ್ದ. ಈ ವೇಳೆ ಆತ್ಮರಕ್ಷಣೆಗಾಗಿ ಇನ್ಸ್ಪೆಕ್ಟರ್ ಬಾಲರಾಜು ಗುಂಡು ಹಾರಿಸಿದ್ದಾರೆ.