ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸಂತೋಷ್ ಅವರು ಯಾರು ಎಂಬುದೇ ಗೊತ್ತಿಲ್ಲ.
ಡೆತ್ ನೋಟ್ ಬರೆದೇ ಇಲ್ಲ. ಮೊಬೈಲ್ ಸಂದೇಶ ಯಾರು ಕಳುಹಿಸಿದ್ದಾರೆ ಎನ್ನುವ ಕುರಿತು ಖಚಿತತೆ ಇಲ್ಲ. ಇದೊಂದು ರಾಜಕೀಯ ಷಡ್ಯಂತ್ರ ಎಂದು ಬುಧವಾರ ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ನಡೆದ ದಿಢೀರ್ ಪತ್ರಿಕಾಗೋಷ್ಠಿಯಲ್ಲಿ ದೂರಿದರು.
ತಮ್ಮ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸುತ್ತಿರುವ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.