ವಿಜಯಪುರ: ಮಕ್ಕಳ ಸಾಹಿತಿ ಶರಣಪ್ಪ ಕಂಚ್ಯಾಣಿ (82) ಬುಧವಾರ ಬೆಳಿಗ್ಗೆ ನಿಧನರಾದರು.ಮುದ್ದೇಬಿಹಾಳ ತಾಲ್ಲೂಕಿನ ಸರೂರ ಗ್ರಾಮದವರಾಗಿದ್ದ ಕಂಚ್ಯಾಣಿ ಶರಣಪ್ಪನವರು ಪ್ರಾಥಮಿಕ ಶಾಲಾ ಶಿಕ್ಷಕರಾಗಿ ವಿವಿಧೆಡೆ ಸೇವೆ ಸಲ್ಲಿಸಿ ವಿಜಯಪುರದಲ್ಲಿ ನೆಲೆಸಿದ್ದರು.
ವಿಜಯಪುರದ ರಾಜೇಂದ್ರನಗರ ಎನ್.ಸಿ. ಸಿ. ಆಫೀಸ್ ಬಳಿ ಇರುವ ಅವರ ಕಿರಿಯ ಪುತ್ರ ಮಹಂತೇಶ ಕಂಚ್ಯಾಣಿಯವರ ಮನೆಯಲ್ಲಿ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿದೆ.
ಮಧ್ಯಾಹ್ನ 3 ಗಂಟೆಗೆ ಬಿ.ಎಲ್.ಡಿ. ಇ ಸಂಸ್ಥೆಯ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕವಿ ಶರಣಪ್ಪ ಕಂಚ್ಯಾಣಿ ಅವರ ಇಚ್ಛೆಯಂತೆ ಕುಟುಂಬಸ್ಥರು ದೇಹದಾನ ಮಾಡಲಿದ್ದಾರೆ.
ನಿವೃತ್ತ ಪ್ರಾಚಾರ್ಯ ಅರವಿಂದ ಕಂಚ್ಯಾಣಿ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಜಂಬುನಾಥ ಕಂಚ್ಯಾಣಿ ಸೇರಿದಂತೆ ಐವರು ಪುತ್ರರು, ಪುತ್ರಿಯರು ಇದ್ದಾರೆ.