ಬೆಂಗಳೂರು : ಉಡುಪಿಯಲ್ಲಿ ಅತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಕುಟುಂಬಕ್ಕೆ ಕೆಪಿಸಿಸಿಯಿಂದ 11 ಲಕ್ಷ ಪರಿಹಾರ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ.
ಮೃತ ಸಂತೋಷ್ ಮನೆಗೆ ಭೇಟಿದ ನಂತ್ರ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕ, ‘ ಸಾವಿಗೆ ಕಾರಣವೇನು?
ಯಾರು ಕಾರಣವೆಂದು ಹೇಳಿದ್ದಾರೆ. ಸಂತೋಷ್ ತಾಯಿ ಮತ್ತು ಪತ್ನಿ ಎಲ್ಲ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಮುಂದೆ ಇಂತಹ ಘಟನೆ ನಡೆಯಬಾರದು. ಪ್ರಧಾನಿಗೆ ದೂರು ನೀಡದರೂ ಸಂತೋಷ್‌ಗೆ ನ್ಯಾಯ ಸಿಕ್ಕಿಲ್ಲ. ನಿಮಗೆ ನ್ಯಾಯ ಕೊಡಿಸುವುದಾಗಿ ನಾವು ಭರವಸೆ ನೀಡಿದ್ದೇವೆ. ಕೂಡಲೇ ಕೆ.ಎಸ್ ಈಶ್ವರಪ್ಪರನ್ನ ಭ್ರಷ್ಟಾಚಾರ ಕಾಯ್ದೆಯಡಿ ಕೇಸ್ ದಾಖಲಿಸಿ ಬಂಧಿಸಲಿ’ ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
‘ರಾಜ್ಯ ಸರ್ಕಾರ, ಸಂತೋಷ್ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಲಿ. ಸಂತೋಷ್ ಪತ್ನಿ ಜಯಶ್ರೀಗೆ ಸರ್ಕಾರಿ ನೌಕರಿ ಕೊಡಲಿ.