ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಸುಸೂತ್ರವಾಗಿ ನಡೆದಿದೆ. ಪರೀಕ್ಷಾ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21ರಿಂದ ಆರಂಭವಾಗಲಿದೆ. ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿನ, 234 ಮೌಲ್ಯಮಾಪನ ಕೇಂದ್ರಗಳಲ್ಲಿ ನಡೆಯಲಿದೆ. ಮೌಲ್ಯಮಾಪನಕ್ಕಾಗಿ 60,000 ಶಿಕ್ಷಕರನ್ನು ನಿಯೋಜಿಸಲಾಗುತ್ತಿದೆ. ಇತ್ತ ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸುವ ಮೌಲ್ಯಮಾಪಕರು, ಸಿಬ್ಬಂದಿಯ ಸಂಭಾವನೆ ದರಗಳನ್ನ ಪರಿಷ್ಕರಣೆ ಮಾಡಲಾಗಿದೆ ಎಂದು ಅಧಿಕಾರಿಗಳು ಇದೇ ವೇಳೆ ಮಾಹಿತಿ ನೀಡಿದ್ದಾರೆ.