ಸುಖಾ ಸುಮ್ಮನೆ ಆರೋಪ ಮಾಡುತ್ತಿರುವ ಕೆಂಪಣ್ಣ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಕೆಂಪಣ್ಣಗೆ ವಾರ್ನಿಂಗ್ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಅವರು ದಾಖಲೆ ಇಲ್ಲದೆ ಸರ್ಕಾರದ ವಿರುದ್ಧ ಆರೋಪ ಮಾಡಬಾರದು.
ಇಂಥವರನ್ನು ಇಟ್ಟುಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಸುಳ್ಳು ಆರೋಪ ಮಾಡುವವರಿಗೆ ನಾಚಿಕೆ ಅಗಬೇಕು. ಎಲ್ಲಾ ಶಾಸಕರ ಮೇಲೂ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಹಾಗಾದ್ರೆ ಕಾಂಗ್ರೆಸ್ ಶಾಸಕರು ಭ್ರಷ್ಟಾಚಾರ ಮಾಡಿಲ್ಲವಾ ಎಂದು ಕೆಂಪಣ್ಣ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Laxmi News 24×7