Breaking News

ಪಕ್ಷದ ಚಟುವಟಿಕೆಯಿಂದ ದೂರವಿದ್ದ ಜಮೀರ್.. ಖಾಸಗಿ ಹೋಟೆಲ್ ನಲ್ಲಿ ಸುರ್ಜೆವಾಲಾ ಭೇಟಿ, ಚರ್ಚೆ

Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್ ಚಟುವಟಿಕೆಯಿಂದ ದೂರವೇ ಉಳಿದಿರುವ ಮಾಜಿ ಸಚಿವ ಜಮೀರ್ ಅಹಮದ್ ಖಾನ್​ ಅವರು ಬುಧವಾರ ರಾತ್ರಿ ದಿಢೀರ್ ಆಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಕಾಂಗ್ರೆಸ್​ನಲ್ಲಿ ಮುಂದುವರೆದ ಜಮೀರ್ ಅಹ್ಮದ್ ಖಾನ್ ಅಸಮಾಧಾನ ಈ ಭೇಟಿ ಮೂಲಕ ಇನ್ನೊಂದು ಹಂತವನ್ನು ತಲುಪಿದೆ ಎಂಬ ಮಾಹಿತಿ ಇದ್ದು, ತಮ್ಮ ಬೇಸರ, ಅಸಮಾಧಾನ ಹಾಗೂ ಕೋಪವನ್ನು ಸುರ್ಜೇವಾಲಾ ಅವರಿಗೆ ವಿವರಿಸಿದ್ದಾರೆ ಎಂಬ ಮಾಹಿತಿ ಇದೆ.

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಆಗಮಿಸದ ಜಮೀರ್, ಕೆಪಿಸಿಸಿ ಕಚೇರಿಯಲ್ಲಿ ಕರೆದ ಸಭೆಗಳಿಂದಲೂ ದೂರ ಉಳಿದಿದ್ದರು. ರಾಜ್ಯ ಕಾಂಗ್ರೆಸ್ ನಾಯಕರಿಂದ ಅಂತರ ಕಾಯ್ದುಕೊಂಡಿರುವ ಜಮೀರ್ ನಿನ್ನೆ ಸುರ್ಜೇವಾಲಾ ಭೇಟಿಯಾಗಿ ನಡೆಸಿದ ಚರ್ಚೆ ತೀವ್ರ ಕುತೂಹಲ ಮೂಡಿಸಿದೆ. ಕೆಲ ದಿನಗಳ ಹಿಂದಿನವರೆಗೂ ಸಿದ್ದರಾಮಯ್ಯಗೆ ಚಾಮರಾಜಪೇಟೆ ಕ್ಷೇತ್ರವನ್ನು ಬಿಟ್ಟುಕೊಡುವ ಬಗ್ಗೆ ಮಾತನಾಡುತ್ತಿದ್ದ ಜಮೀರ್ ಇದೀಗ ಏಕಾಏಕಿ ಪಕ್ಷದ ವಿರುದ್ಧ ಮುನಿಸಿಕೊಂಡಿದ್ದಾರೆ.


Spread the love

About Laxminews 24x7

Check Also

‘ರಾಹುಲ್ ಗಾಂಧಿ, ಆತನ ಖಾಂದಾನ್ ಚೋರ್’: ಹರಿಯಾಣದಲ್ಲಿ ಮತಗಳ್ಳತನ ಆರೋಪಕ್ಕೆ ಛಲವಾದಿ ಟೀಕೆ

Spread the loveಚಾಮರಾಜನಗರ: “ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಕುಂಠಿತವಾಗಿದೆ. ಕಾಂಗ್ರೆಸ್​ನವರು ಮಾತೆತ್ತಿದ್ರೆ ಗ್ಯಾರಂಟಿ ಎಂದು ದಿನ ದೂಡುತ್ತಿದ್ದಾರೆ” ಎಂದು ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ