ಕೊಡಗು: ಜಿಲ್ಲೆಯಾದ್ಯಂತ ಭಾರೀ ಪ್ರಮಾಣದ ಮಳೆಯಾದ ಹಿನ್ನೆಲೆಯಲ್ಲಿ ಮಿನಿ ಬಸ್ವೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 275 ಮಡಿಕೇರಿ ಸಮೀಪದ ಬೋಯಿಕೇರಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ.
ಸದ್ಯ ಯಾವುದೇ ರೀತಿಯ ಸಾವು, ನೋವುಗಳು ಸಂಭವಿಸಿಲ್ಲ. ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರಾಗಿದ್ದಾರೆ. ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ.