ಎಮ್ಮೆ ಮೇಯಿಸಲು ಹೋಗಿದ್ದ ರೈತನಿಗೆ ಸಿಡಿಲು ಬಡಿದು ಆ ರೈತ ಮತ್ತು ಎಮ್ಮೆ ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ತಾಲೂಕಿನ ತುಮ್ಮರಗುದ್ದಿ ನಡೆದಿದೆ.

ತುಮ್ಮರಗುದ್ದಿ ಗ್ರಾಮದ 25 ವರ್ಷದ ಭೀಮಪ್ಪ ಅಡಿವೆಪ್ಪ ಬಸರಿಮರದ ಸಿಡಿಲು ಬಡಿದು ಸಾವನ್ನಪ್ಪಿರುವ ದುರ್ದೈವಿ. ಸಿಡಿಲಿನ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ಎಮ್ಮೆ ಸ್ಥಳದಲ್ಲಿಯೇ ಸಾವನ್ನಪ್ಪಿದೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Laxmi News 24×7