Breaking News

ಈಶ್ವರಪ್ಪ ರಾಜೀನಾಮೆ’ಗೂ ಮುನ್ನವೇ ’29 ಪಿಡಿಓ’ಗಳ ವರ್ಗಾವಣೆ

Spread the love

ಬೆಂಗಳೂರು,ಏ.15- ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಇಲಾಖೆಯ 29 ಪಿಡಿಒ ಅಧಿಕಾರಿಗಳನ್ನು ಏಕಾಏಕಿ ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿದೆ.

 

ಉಡುಪಿಯ ಶಾಂಭವಿ ಹೋಟೆಲ್‍ನಲ್ಲಿ ಬೆಳಗಾವಿ ಮೂಲದ ಸಂತೋಷ್ ಪಾಟೀಲ್ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡ ಬಳಿಕ ಈಶ್ವರಪ್ಪ ದಿಢೀರನೇ 29 ಪಿಡಿಒ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವುದು ಹಲವು ಸಂಶಯಗಳನ್ನು ಹುಟ್ಟು ಹಾಕಿದೆ.

ಏಪ್ರಿಲ್ 12ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬಯಲಿಗೆ ಬಂದಿತ್ತು. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮಾಧ್ಯಮದವರಿಗೆ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಸಚಿವ ಈಶ್ವರಪ್ಪನವರೇ ಕಾರಣ ಎಂದು ವಾಟ್ಸಪ್ ಮಾಡಿದ್ದರು. ಆ ವೇಳೆ ಸಚಿವ ಈಶ್ವರಪ್ಪ ಮೈಸೂರಿನಲ್ಲಿ ಇದ್ದರು.

ಇದೀಗ ಇದೇ ದಿನದಂದು ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 29 ಪಿಡಿಒಗಳನ್ನು ವರ್ಗಾವಣೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ