Breaking News

ಬಿಜೆಪಿ ಟೋಪಿ ಧರಿಸದ ಬಿಎಸ್‌ವೈ, ವೇದಿಕೆಗೆ ಬಾರದ ಸಂಘಟನಾ ಕಾರ್ಯದರ್ಶಿ ಸಂತೋಷ್‌

Spread the love

ಹೊಸಪೇಟೆ: ವಿಜಯನಗರದ ನೆಲದಲ್ಲಿ ಆರಂಭಗೊಂಡ ಬಿಜೆಪಿ ರಾಜ್ಯ ಕಾರ್ಯಕಾರಿಣಿಗೂ ಮುನ್ನ ನಡೆದ ಪಕ್ಷದ ಬಾವುಟ ಹಾರಿಸುವ ಕಾರ್ಯಕ್ರಮದಲ್ಲಿ ಮುಖಂಡರೊಬ್ಬರು ಶಾಸಕ ಬಿ.ಎಸ್‌. ಯಡಿಯೂರಪ್ಪನವರಿಗೆ ಬಿಜೆಪಿ ಟೋಪಿ ಹಾಕಲು ಮುಂದಾದರು. ಆದರೆ, ಅವರು ಅದನ್ನು ನಿರಾಕರಿಸಿದರು.

ಎಲ್ಲ ಮುಖಂಡರು ಟೋಪಿ ಧರಿಸಿದ್ದರು. ಆದರೆ, ಬಿಎಸ್‌ವೈ ಮಾತ್ರ ಧರಿಸಿರಲಿಲ್ಲ. ಸಭಾ ಕಾರ್ಯಕ್ರಮದಲ್ಲೂ ಟೋಪಿ ಧರಿಸದೇ ಪಾಲ್ಗೊಂಡಿದ್ದರು.

ಇನ್ನು, ಬೆಳಿಗ್ಗೆಯಿಂದ ಎಲ್ಲೆಡೆ ಓಡಾಡಿಕೊಂಡಿದ್ದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಎಲ್ಲ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡರು. ಆದರೆ, ಸಭಾ ಕಾರ್ಯಕ್ರಮದ ವೇದಿಕೆಗೆ ಬರಲಿಲ್ಲ. ನಿರೂಪಕರು ಅವರನ್ನು ಕರೆದರೂ ಕೂಡ ಅವರು ಮೇಲೆ ಬರದೇ ಕಾರ್ಯಕಾರಿಣಿ ಸದಸ್ಯರೊಂದಿಗೆ ಕುಳಿತರು.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮಾತನಾಡಿ, ಕಾಂಗ್ರೆಸ್‌ ಸಂಚಿನ ಪಕ್ಷ. ಅದರಲ್ಲಿ ಅದು ಪರಿಣಿತಿ ಹೊಂದಿದೆ. ಕೆ.ಎಸ್‌. ಈಶ್ವರಪ್ಪ ವಿರುದ್ಧ ಕೂಡ ಕಾಂಗ್ರೆಸ್‌ ಸಂಚು ಮಾಡಿ, ಅವರು ರಾಜೀನಾಮೆ ನೀಡುವಂತೆ ಮಾಡಿದೆ. ಸಂತೋಷ್‌ ಪಾಟೀಲ ಆತ್ಮಹತ್ಯೆಗೆ ಹಲವು ಆಯಾಮಗಳಿವೆ. ಆದರೆ, ತನಿಖೆ ನಂತರ ಎಲ್ಲವೂ ಹೊರಬರಲಿದೆ ಎಂದರು.

ಈಶ್ವರಪ್ಪನವರು ಪುನಃ ಮಂತ್ರಿಯಾಗುವರು. ಅವರು ಪಕ್ಷದ ದೊಡ್ಡ ನೇತಾರರು. ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ’ ಎಂದು ಹೇಳಿದರು.


Spread the love

About Laxminews 24x7

Check Also

ಬಿಡಿಸಿಸಿ ಬ್ಯಾಂಕಿನ‌ ಚುನಾವಣೆ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ ಸಂಬಂಧ ಅಲ್ಲಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

Spread the loveಬೆಳಗಾವಿ- ಬಿಡಿಸಿಸಿ ಬ್ಯಾಂಕಿನ‌ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ