Breaking News

ಪಾಯಿಂಟ್ ಟೇಬಲ್ ಅನ್ನೇ ತಲೆಕೆಳಗಾಗಿಸಿದ ಆರ್​ಸಿಬಿ ಗೆಲುವು

Spread the love

IPL 2022 Orange Cap and Purple Cap: ಐಪಿಎಲ್ 2022 ಪಾಯಿಂಟ್ ಟೇಬಲ್​ನಲ್ಲಿ ಆರನೇ ಸ್ಥಾನದಲ್ಲಿದ್ದ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಮೂನೇ ಸ್ಥಾನಕ್ಕೆ ಜಿಗಿದಿದೆ.ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) 15ನೇ ಆವೃತ್ತಿಯ ಅಸಲಿ ಆಟ ಈಗ ಶುರುವಾಗಿದೆ.

ಒಂದು ತಂಡದ ಸೋಲು-ಗೆಲುವು ಇನ್ನೊಂದು ತಂಡದ ಅಳಿವು-ಉಳಿವಿನ ಲೆಕ್ಕಚಾರ ಆರಂಭವಾಗಿದೆ. ಈ ಬಾರಿ ಹಿಂದಿನ ಸೀಸನ್​ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ ಹೊಸ ಆಟಗಾರರನ್ನು ಸೇರಿಸಿ ಭರ್ಜರಿ ಪ್ರದರ್ಶನ ತೋರುತ್ತಿದ್ದರೆ, ಹಾಲಿ ಚಾಂಪಿಯನ್, ಮಾಜಿ ಚಾಂಪಿಯನ್ ತಂಡಗಳು ಗೆಲುವಿಗಾಗಿ ಹಾತೊರೆಯುತ್ತಿದೆ. ಕಳೆದ ಬಾರಿಯ ವಿನ್ನರ್ ಚೆನ್ನೈ ಸೂಪರ್ ಕಿಂಗ್ಸ್ ಸತತ ನಾಲ್ಕು ಸೋಲಿನ ಬಳಿಕ ಗೆಲುವು ಕಂಡಿದ್ದರೆ ಇತ್ತ ಮಾಜಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಆಡಿದ ಆರೂ ಪಂದ್ಯಗಳಲ್ಲಿಯು ಸೋಲುಂಡು ಕೆಟ್ಟ ದಾಖಲೆ ಬರೆದಿದೆ. ಇದರ ನಡುವೆ ಎರಡು ಹೊಸ ತಂಡಗಳಾದ ಗುಜರಾತ್ ಮತ್ತು ಲಖನೌ ಕೂಡ ನಿರೀಕ್ಷೆ ಹುಟ್ಟಿಸಿದೆ. ಈ ಬಾರಿ ಅತಿ ಹೆಚ್ಚು ರನ್ ಕಲೆಹಾಕಿದವರಿಗೆ ಆರೆಂಜ್ ಕ್ಯಾಪ್, ಅತಿ ಹೆಚ್ಚು ವಿಕೆಟ್ ಕಿತ್ತವರು ಪರ್ಪಲ್ ಕ್ಯಾಪ್ ಧರಿಸುತ್ತಾರೆ. ಹಾಗಾದ್ರೆಐಪಿಎಲ್2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.


Spread the love

About Laxminews 24x7

Check Also

ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶ ನೀಡಿದೆ.

Spread the loveಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ