Breaking News

ಪತ್ನಿಗೆ‌ ಪ್ರಜ್ಞೆ ತಪ್ಪಿಸಿ ನಗ್ನಚಿತ್ರ ಸೆರೆಹಿಡಿದು ಸ್ನೇಹಿತರಿಗೆ ಕಳುಹಿಸಿದ ಪತಿ

Spread the love

ಬೆಂಗಳೂರು: ಜ್ಯೂಸ್‌ನಲ್ಲಿ ಮತ್ತು ಬರುವ ವಸ್ತು ಹಾಕಿ ಪತ್ನಿಗೆ ಕೊಟ್ಟು ಆಕೆ ಪ್ರಜ್ಞೆತಪ್ಪಿದ ಬಳಿಕ ನಗ್ನ ಚಿತ್ರ ಸೆರೆಹಿಡಿದು ಅದನ್ನು ಸ್ನೇಹಿತರಿಗೆ ಕಳುಹಿಸಿದ ಘಟನೆ ಬಸವನಗುಡಿ ಮಹಿಳಾ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಹಿಳೆ (30) ದೂರಿನ ಆಧಾರದ ಮೇಲೆ ಆಕೆಯ ಪತಿ ವೆಂಕಟಸ್ವಾಮಿ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ದೂರುದಾರ ಮಹಿಳೆ 2013ರಲ್ಲಿ ಮೊದಲ ಪತಿಗೆ ವಿಚ್ಛೇದನ ನೀಡಿದ್ದು, ವೆಂಕಟಸ್ವಾಮಿಯನ್ನು ಪ್ರೀತಿಸಿ 2ನೇ ವಿವಾಹವಾಗಿದ್ದಳು. ವಿವಾಹವಾದ ಆರಂಭದಲ್ಲಿ ಪತ್ನಿ ಜತೆಗೆ ಅನ್ಯೋನ್ಯವಾಗಿದ್ದ ಪತಿ, ನಂತರ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ. ಇತ್ತೀಚೆಗೆ ಆರೋಪಿಯು ಜ್ಯೂಸ್‌ನಲ್ಲಿ ಮತ್ತು ಬರುವ ವಸ್ತು ಬೆರೆಸಿ ಪತ್ನಿಗೆ ಕೊಟ್ಟಿದ್ದ. ಪತ್ನಿ ಪ್ರಜ್ಞೆ ತಪ್ಪಿದ ನಂತರ ಆಕೆಯ ನಗ್ನ ಚಿತ್ರ ಸೆರೆ ಹಿಡಿದು ಸ್ನೇಹಿತರಿಗೆ ಕಳುಹಿಸಿದ್ದ.

ಸ್ನೇಹಿತನೊಂದಿಗೆ ಲೈಂಗಿಕವಾಗಿ ಸಹಕರಿಸುವಂತೆ ಪತ್ನಿಗೆ ಪೀಡಿಸುತ್ತಿದ್ದ. ಈ ನಡುವೆ ದೂರುದಾರ ಮಹಿಳೆಯ ತಂದೆ ಮೃತಪಟ್ಟಿದ್ದರು. ತಂದೆಗೆ ಬರುವ ಪೆನ್ಷನ್​ ಹಣ ಕೊಡುವಂತೆ ಪತಿ ಹಿಂಸೆ ಕೊಡುತ್ತಿದ್ದ. ಹಣ ಕೊಡಲು ನಿರಾಕರಿಸಿದಾಗ ನಗ್ನ ಚಿತ್ರವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ