ಬೆಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ಹಾಗೂ ಬಂಧನಕ್ಕೆ ಒತ್ತಾಯಿಸಿ, ಕಾಂಗ್ರೆಸ್ ನಾಯಕರು ಏಪ್ರಿಲ್ 14ರಂದು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕೋ ಪ್ರತಿಭಟನೆ ನಡೆಸಿದ್ದರು.
ಈ ಪ್ರಕರಣದಲ್ಲಿ ಇದೀಗ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ 36 ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದಲ್ಲಿ ಗುರುವಾರ (ಏಪ್ರಿಲ್ 14) ಕಾನೂನು ಬಾಹಿರವಾಗಿ ಮುತ್ತಿಗೆ ಹಾಕಲು ಯತ್ನಿಸಿದ ಪ್ರಕರಣದಲ್ಲಿ, ಮಾಜಿ ಸಿಎಂ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಸೇರಿದಂತೆ 36 ಕಾಂಗ್ರೆಸ್ ನಾಯಕರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.