ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿಯಲ್ಲಿ ಬಿಜೆಪಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ನಮ್ಮ ತಂದೆ ಪ್ರಕಾಶ ಹುಕ್ಕೇರಿ ಅವರು ಸರ್ಕಾರದ ವತಿಯಿಂದ ಮೃತ ಸಂತೋಷ್ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ಮತ್ತು ಬಾಕಿಯಿರುವ ಕಾಮಗಾರಿ ಯೋಜನಾ ಮೊತ್ತವನ್ನು ಪಾವತಿಸಬೇಕು ಎಂದು ಆಗ್ರಹಿಸಿದರು ಜೊತೆಗೆ ನಮ್ಮ ಕ್ಷೇತ್ರದ ಕಾರ್ಯಕರ್ತರ ಆಶಯದಂತೆ ವೈಯಕ್ತಿಕವಾಗಿ ಸಂತೋಷ ಪಾಟೀಲನ ಪುತ್ರನ ವಿದ್ಯಾಭ್ಯಾಸಕ್ಕಾಗಿ 5 ಲಕ್ಷ ರೂಪಾಯಿ ಹಣವನ್ನು ನೀಡುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಜು ಕಾಗೆ, ಕಾಕಾಸಾಬ ಪಾಟೀಲ, ವಿರಕುಮಾರ ಪಾಟೀಲ, ಎ ಬಿ ಪಾಟೀಲ, ಲಕ್ಷಮಣರಾವ ಚಿಂಗಳೆ, ಮಹಾವೀರ ಮೋಹಿತೆ, ಈರಗೌಡಾ ಪಾಟೀಲ, ಅನಿಲ ಪಾಟೀಲ, ಸತೀಶ ಕುಲಕರ್ಣಿ, ಕಾಂತಾ ನಾಯಿಕ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.