ದಾವಣಗೆರೆ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಬಿಜೆಪಿಯೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳವುದು ಶೇ. 100 ನಿಜ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ವಿಧಾನಸೌಧದ ಒಳಗೆ ಮತ್ತು ಹೊರಗೆ ಬಿಜೆಪಿ ಪರ ಎಂಬುದು ಸಾಬೀತಾಗಿದೆ.
ಕುಮಾರಸ್ವಾಮಿ ಯಾವಾಗಲೂ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ. ಮ್ಯಾಚ್ ಫಿಕ್ಸಿಂಗ್ ಶೇ. 100 ನಿಜ ಎಂದರು.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿಂದೆ ಮಹಾನಾಯಕ ಇದ್ದಾರೆ ಎಂದು ಆರೋಪ ಇದೆ ಎಂದು ಯಾರು ಹೇಳಿದ್ದಾರೆ ಅವರನ್ನೇ ಗೋಕಾಕಿಗೆ ಹೋಗಿ ನೇರವಾಗಿ ಕೇಳಿ. ಯಾರ ಬಳಿ ಬಾಂಬ್ ಇರುತ್ತದೆಯೋ ಅವರು ಬ್ಲಾಸ್ಟ್ ಮಾಡಬೇಕಾಗುತ್ತದೆ ಎಂದು ಮಾರ್ಮಿಕವಾಗಿ ಉತ್ತರಿಸಿದರು.