Breaking News

ಸಂತ್ರಸ್ತರಿಗೆ ಕೆಎಸ್​ಆರ್​ಟಿಸಿ ಸಂಸ್ಥೆ ಪರಿಹಾರ ನೀಡಿ, ಸೀಜ್ ಆಗಿದ್ದ ಬಸ್​ ಮರಳಿ ವಶಕ್ಕೆ ಪಡೆದುಕೊಂಡಿದೆ.

Spread the love

ಸಾಂಗ್ಲಿ (ಮಹಾರಾಷ್ಟ್ರ): 2015ರಲ್ಲಿ ಮಹಾರಾಷ್ಟ್ರದಲ್ಲಿ ನಡೆದಿದ್ದ ಬಸ್​​ ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಾರಿಗೆ ಸಂಸ್ಥೆ ಬಸ್​​ ಜಪ್ತಿ ಮಾಡಿ, ಸಾವನ್ನಪ್ಪಿದ್ದ ಕುಟುಂಬಸ್ಥರಿಗೆ ಬಸ್ ಹಸ್ತಾಂತರ ಮಾಡಲಾಗಿತ್ತು.

ಆದ್ರೆ ಸಂತ್ರಸ್ತರಿಗೆ ಇಂದು ಕೆಎಸ್​ಆರ್​ಟಿಸಿ ಪರಿಹಾರ ನೀಡಿ ಮರಳಿ ಬಸ್ ಪಡೆದುಕೊಂಡಿದೆ.

ಪ್ರಕರಣದ ವಿವರ: 2015ರಲ್ಲಿ ಮೀರಜ್​​ನಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್​ ಡಿಕ್ಕಿ ಹೊಡೆದು ಭಾನುದಾಸ್ ಬೋಸಲೆ ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ತಮಗೆ ಪರಿಹಾರ ನೀಡುವಂತೆ ಬೋಸಲೆ ಕುಟುಂಬ ಸಾಂಗ್ಲಿ ನ್ಯಾಯಾಲಯದಲ್ಲಿ ದಾವೆ ಹೂಡಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್​, 2016ರಲ್ಲಿ ಮೃತನ ಕುಟುಂಬಕ್ಕೆ ಕರ್ನಾಟಕ ಸಾರಿಗೆ ಸಂಸ್ಥೆ 8 ಲಕ್ಷ, 33 ಸಾವಿರದ 563 ರೂಪಾಯಿ ನೀಡುವಂತೆ ಆದೇಶಿಸಿತ್ತು.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ