ಒಂದು ಮಾಸ್ ಕಮರ್ಷಿಯಲ್ ಸಿನಿಮಾಗೋಸ್ಕರ ಪ್ರೇಮ್ ಮತ್ತು ಧ್ರುವ ಸರ್ಜಾ ಕೈ ಜೋಡಿಸಲಿದ್ದಾರೆ ಎಂಬ ಸುದ್ದಿ ಈ ಮೊದಲಿನಿಂದಲೂ ಕೇಳಿ ಬರುತ್ತಲೇ ಇತ್ತು. ಆದರೆ, ಯಾವುದೂ ಅಧಿಕೃತವಾಗಿರಲಿಲ್ಲ. ಈಗ ಪ್ರೇಮ್ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ.ನಿರ್ದೇಶಕ ಪ್ರೇಮ್ (Director Prem) ಅವರು ಸ್ಯಾಂಡಲ್ವುಡ್ನಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದವರು.
ಅವರ ನಿರ್ದೇಶನದ ‘ಜೋಗಿ’ ಚಿತ್ರವನ್ನು ಸಿನಿಪ್ರಿಯರು ಈಗಲೂ ನೆನಪು ಮಾಡಿಕೊಳ್ಳುತ್ತಾರೆ. ಅವರ ಅಭಿಮಾನಿ ಬಳಗ ದೊಡ್ಡದು. ಇನ್ನು, ಧ್ರುವ ಸರ್ಜಾ (Dhruva Sarja) ಸ್ಯಾಂಡಲ್ವುಡ್ನ ಬೇಡಿಕೆಯ ನಟ. ಅವರು ‘ಅದ್ದೂರಿ’, ‘ಭರ್ಜರಿ’ ಮೊದಲಾದ ಚಿತ್ರಗಳ ಮೂಲಕ ಸ್ಯಾಂಡಲ್ವುಡ್ನಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಈಗ ಇವರಿಬ್ಬರೂ ಒಂದಾಗಿದ್ದಾರೆ. ಧ್ರುವ ಸರ್ಜಾ ಮುಂದಿನ ಚಿತ್ರಕ್ಕೆ ಪ್ರೇಮ್ ಆಯಕ್ಷನ್ ಕಟ್ ಹೇಳುತ್ತಿದ್ದಾರೆ.