ಬೆಂಗಳೂರು: ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದು ಒಂದು ವಾರ ಕಳೆದರೂ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರನ್ನು ಬಂಧಿಸದಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ಹಲವು ದಿನಗಳವರೆಗೂ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿರಲಿಲ್ಲ.
ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನವಿಲ್ಲ. ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ, ದಿವ್ಯಾ ಮನೆಯಲ್ಲಿ ತಿಂದ ಒಂದು ಪ್ಲೇಟ್ ಕೇಸರಿ ಬಾತ್‌ಗೆ ಇಷ್ಟೊಂದು ನಿಯತ್ತೇ’ ಎಂದು ಪ್ರಶ್ನಿಸಿದೆ.
Laxmi News 24×7