Breaking News

ಪಿಯುಸಿ ಪರೀಕ್ಷೆ ಬರೆಯಲು ಪೊಲೀಸ್ ಭದ್ರತೆ! ಈತನಿಗೆ

Spread the love

ಹುಬ್ಬಳ್ಳಿ: ವಾಟ್ಸ್​ಆಯಪ್​ನಲ್ಲಿ ಅವಹೇಳನಕಾರಿ ಸ್ಟೇಟಸ್​ ಹಾಕಿಕೊಂಡಿದ್ದ ಆರೋಪಿ, ಆನಂದನಗರ ನಿವಾಸಿ ಅಭಿಷೇಕ ಹಿರೇಮಠಗೆ ಪೊಲೀಸ್​ ಭದ್ರತೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ.

ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಅಭಿಷೇಕ ಅವಹೇಳನಕಾರಿ ಸ್ಟೇಟಸ್​ ಇಟ್ಟಿದ್ದ ಆರೋಪದಡಿ ಬಂಧಿತನಾಗಿದ್ದಾನೆ.

ಈತನಿಗೆ ಏ.22ರಿಂದ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ವಕೀಲ ಸಂಜು ಬಡಸ್ಕರ 4ನೇ ಅಧಿಕ ದಿವಾಣಿ ಮತ್ತು ಜೆಎಂಎಫ್​ಸಿ ನ್ಯಾಯಾಲಯಕ್ಕೆ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದರು.

ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಜಾಮೀನು ಅರ್ಜಿ ವಜಾಗೊಳಿಸಿದೆ. ಆದರೆ, ಅಭಿಷೇಕನಿಗೆ ಪರೀಕ್ಷೆ ಬರೆಯಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಜೈಲಿನಲ್ಲೇ ಅಭ್ಯಾಸ ಮಾಡಲು ಪುಸ್ತಕ, ಮತ್ತಿತರ ವ್ಯವಸ್ಥೆ ಮಾಡಬೇಕು. ಸೂಕ್ತ ಬಂದೋಬಸ್ತ್​ ಮೂಲಕ ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ ಎಂದು ಅಭಿಷೇಕ ಪರ ವಕೀಲ ಸಂಜು ಬಡಸ್ಕರ ‘ವಿಜಯವಾಣಿ’ಗೆ ತಿಳಿಸಿದ್ದಾರೆ.


Spread the love

About Laxminews 24x7

Check Also

ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ ತುಂಬಿದ ನರೇಂದ್ರ ಗ್ರಾಮ ವ್ಯಕ್ತಿ.

Spread the love ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ