Breaking News

ಸ್ನೇಹಿತನ ಶವ ಊರಿಗೆ ಕೊಂಡೊಯ್ಯುತ್ತಿದ್ದ ಮೂವರು ಮಾರ್ಗ ಮಧ್ಯೆ ಸ್ಥಳದಲ್ಲೇ ಸಾವು!

Spread the love

ರಾಯಚೂರು: ಬೆಂಗಳೂರಿನಲ್ಲಿ ಮೃತಪಟ್ಟಿದ್ದ ಗೆಳೆಯನ ಶವವನ್ನು ಊರಿಗೆ ಕೊಂಡೊಯ್ಯುತ್ತಿದ್ದ ಮೂವರು ಮಿತ್ರರು ಮಾರ್ಗಮಧ್ಯೆ ಭೀಕರ ಅಪಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಗೊಲ್ಲಪಲ್ಲಿ ಬಳಿ ಈ ಅಪಘಾತ ಸಂಭವಿಸಿದ್ದು, ಅಂಬರೀಷ್ (30), ಗೋವಿಂದ್ (35) ದೇವರಾಜ್ (34) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಕಾರು ಚಾಲಕ ಉಸ್ಮಾನ್ ಪಾಷಾ ಹಾಗೂ ಯಲ್ಲಾಲಿಂಗ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಸಾವಿಗೀಡಾದವರು ಹಾಗೂ ಗಾಯಾಳುಗಳು ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.

ಇವರ ಸ್ನೇಹಿತ ಬಸಯ್ಯ ಎಂಬಾತ ನಿನ್ನೆ ಬೆಂಗಳೂರಿನ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದ. ಆತನ ಶವವವನ್ನು ತೆಗೆದುಕೊಂಡು ನಿನ್ನೆ ರಾತ್ರಿ ಬೆಂಗಳೂರಿನಿಂದ ಹೊರಟು ಯಾದಗಿರಿ ಜಿಲ್ಲೆಯ ವಡಗೇರಾ ಎಂಬಲ್ಲಿಗೆ ಹೊರಟಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ