Breaking News

ಹುಬ್ಬಳ್ಳಿ ಗಲಭೆ: ಎಐಎಂಐಎಂ ಮುಖಂಡ ಬಂಧನ?

Spread the love

ಹುಬ್ಬಳ್ಳಿ: ನಗರದಲ್ಲಿ ಇತ್ತೀಚಿಗೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಐಎಂಐಎಂ ಮುಖಂಡ ಮೊಹಮ್ಮದ್​ ಆರೀಫ್​ನನ್ನು ಗುರುವಾರ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಮುಖ ಆರೋಪಿ ಮೌಲ್ವಿ ಜತೆ ಸೇರಿ ಈತ ಪೊಲೀಸ್ ಇನ್ಸ್‌ಪೆಕ್ಟರ್ ಜತೆ ವಾಗ್ವಾದ ಮಾಡಿದ್ದ.

ಗಲಭೆಗೆ ಕಾರಣವಾಗಿದ್ದ ಎಂಬ ಆರೋಪದಡಿ ವಶಕ್ಕೆ ಪಡೆಯಲಾಗಿದೆ‌ ಎಂಬ ಮಾಹಿತಿ ಲಭ್ಯವಾಗಿದೆ. ಗಲಭೆಗೆ ಪ್ರಚೋದನೆ ನೀಡಿದ್ದ ಮಂಟೂರ ರಸ್ತೆ ಮಿಲ್ಲತ್ ನಗರದ ಮೌಲ್ವಿ ಹೈದರಾಬಾದ್​ನಲ್ಲಿ ಅವಿತುಕೊಂಡಿದ್ದಾನೆಂಬ ಮಾಹಿತಿ ಆಧರಿಸಿ ತನಿಖಾ ತಂಡ ಅಲ್ಲಿಗೂ ತೆರಳಿದೆ.

ಈತ ಗಲಭೆ ದಿನ ಸಮಾಜದ ಧರ್ಮ ಗುರುಗಳು ಬರುತ್ತಿದ್ದಾರೆ. ಅಲ್ಲಿಯವರೆಗೆ ಇರುತ್ತೇನೆಂದು ಪೊಲೀಸರಿಗೆ ಸುಳ್ಳು ಹೇಳಿ ದಾರಿ ತಪ್ಪಿಸಿ ಗಲಭೆ ಮಾಡಿಸಿದ್ದ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ