Breaking News

ಜನ ಹಾಗೂ ಜಾನುವಾರಿಗಳಿಗೆ ಕುಡಿಯುವ ನೀರಿಗಾಗಿ 10 ದಿನಗಳವರೆಗೆ ನೀರು ಬಿಡಲು ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಹಿಡಕಲ್ ಜಲಾಶಯದಿಂದ ಜಿಆರ್‌ಬಿಸಿ, ಜಿಎಲ್‌ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡಲು ಕೆಎಮ್‌ಎಫ್ ಅಧ್ಯಕ್ಷ ಬಾಲಚ

ಮೂಡಲಗಿ: ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ತಕ್ಷಣವೇ ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಕೆಎಮ್‌ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಗುರುವಾರ ಸಂಜೆ ಪ್ರತಿಕಾ ಹೇಳಿಕೆಯನ್ನು ನೀಡಿರುವ ಅವರು, ಈಗಾಗಲೇ ಹಿಡಕಲ್ ಜಲಾಶಯದಲ್ಲಿ ಗುರುವಾರದ ಮಾಹಿತಿಯಂತೆ 12 ಟಿಎಮ್‌ಸಿ ನೀರು ಸಂಗ್ರಹವಿದ್ದು, ಮೂರೂ ಕಾಲುವೆಗಳಿಗೆ 10 ದಿನಗಳವರೆಗೆ ಒಟ್ಟು 5 ಟಿಎಮ್‌ಸಿ ನೀರು ಬಿಟ್ಟರೆ ಸಾರ್ವಜನಿಕರಿಗೆ ಮತ್ತು ಜಾನುವಾರುಗಳಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

ಘಟಪ್ರಭಾ ಎಡದಂಡೆ ಕಾಲುವೆಗೆ ದಿನಪ್ರತಿ 2400 ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ 2000 ಕ್ಯೂಸೆಕ್ಸ್ ಮತ್ತು ಸಿಬಿಸಿ ಕಾಲುವೆಗೆ 500 ಕ್ಯೂಸೆಕ್ಸ್ ನೀರನ್ನು ಹರಿಸುವಂತೆ ಮನವಿ ಮಾಡಿಕೊಂಡಿರುವ ಅವರು, 10 ದಿನಗಳವರೆಗೆ ನೀರನ್ನು ಹಿಡಕಲ್ ಜಲಾಶಯದಿಂದ ಬಿಡುಗಡೆ ಮಾಡಿದರೆ ಬೆಳಗಾವಿ, ಬಾಗಲಕೋಟ ಜಿಲ್ಲೆಗಳ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಕೇವಲ ಕುಡಿಯುವ ನೀರಿಗಾಗಿ ಮಾತ್ರ ಈ ಜಲಾಶಯದಿಂದ ನೀರನ್ನು ಹರಿಸಬೇಕು. ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಬೇಸಿಗೆಯ ಸಂದರ್ಭದಲ್ಲಿ ಕುಡಿಯಲಿಕ್ಕೆ ನೀರು ಅಗತ್ಯವಾಗಿದೆ. ಸಾರ್ವಜನಿಕರ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ತಕ್ಷಣವೇ ಹಿಡಕಲ್ ಜಲಾಶಯದಿಂದ  ನೀರನ್ನು ಬಿಡುಗಡೆ ಮಾಡುವಂತೆ ಅವರು ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ.

ಗೋಕಾಕ, ಮೂಡಲಗಿ, ರಾಯಬಾಗ, ಮುಧೋಳ, ಜಮಖಂಡಿ, ಬೀಳಗಿ ತಾಲೂಕುಗಳ ಸಾರ್ವಜನಿಕರಿಗೆ ಈ ನೀರು ಸದ್ಭಳಕೆಯಾಗಲಿದೆ. ಜೊತೆಗೆ ಜಾನುವಾರುಗಳಿಗೂ ಸಹ ಅನುಕೂಲವಾಗಲಿದೆ. ಪ್ರಸಕ್ತ ಬೇಸಿಗೆಯಲ್ಲಿ ಸಂಭವಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಇತ್ಯರ್ಥಗೊಳಿಸುವಂತೆಯೂ ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮತ್ತು ನೀರಾವರಿ ಇಲಾಖೆಯ ಮುಖ್ಯ ಇಂಜೀನಿಯರ್ ಅವರಿಗೆ ದೂರವಾಣಿ ಮೂಲಕ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ