Breaking News

B.J.P.ದಕ್ಷಿಣ ಕರ್ನಾಟಕ ಭಾಗದಲ್ಲಿ ತನ್ನ ಶಕ್ತಿಯನ್ನು ಬಲಗೊಳಿಸಲು ಸಾಧ್ಯವಾಗಿಲ್ಲ ಎಂಬ ಬೇಸರ ಪಕ್ಷದ ರಾಷ್ಟ್ರೀಯ ನಾಯಕರಲ್ಲಿ ಮೂಡಿದೆ

Spread the love

ಬೆಂಗಳೂರು: ರಾಜ್ಯ ಬಿಜೆಪಿ ಹೇಗಾದರೂ ಮಾಡಿ ಮತ್ತೆ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಬೇಕೆಂದು ಈಗಿನಿಂದಲೇ ಕಾರ್ಯತಂತ್ರ ರೂಪಿಸುತ್ತಿದೆ. ಆದರೆ, ಟಾರ್ಗೆಟ್‌ 150 ತಲುಪಲು ದಕ್ಷಿಣ ಕರ್ನಾಟಕದಲ್ಲಿ ಒಕ್ಕಲಿಗ ಸಮುದಾಯ ಸೆಳೆಯಲು ಸಮರ್ಥ ನಾಯಕನ ಹುಡುಕಾಟದಲ್ಲಿದೆ.

ರಾಜ್ಯದಲ್ಲಿ ಬಿಜೆಪಿ ಎರಡು ಬಾರಿ ಅಧಿಕಾರಕ್ಕೆ ಬಂದಿದ್ದರೂ, ಬಹುತೇಕ ಲಿಂಗಾಯತ ಸಮುದಾಯದ ಬೆಂಬಲದಿಂದಲೇ ಅಧಿಕಾರಕ್ಕೆ ಬಂದಿದೆ ಎಂಬ ಅಭಿಪ್ರಾಯ ರಾಜ್ಯದ ಜನರಲ್ಲಿ ಹಾಗೂ ಪಕ್ಷದಲ್ಲಿಯೂ ಇದೆ. ಎರಡು ಬಾರಿಯೂ ಬಿಜೆಪಿಗೆ ಒಳ್ಳೆಯ ಅವಕಾಶವಿದ್ದರೂ, ಸ್ಪಷ್ಟ ಬಹುಮತದಿಂದ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಧ್ಯವಾಗಿಲ್ಲ. ಕರಾವಳಿ, ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದಲ್ಲಿ ಪ್ರಬಲವಾಗಿರುವ ಬಿಜೆಪಿಗೆ ಒಕ್ಕಲಿಗ ಸಮುದಾಯ ಪ್ರಬಲವಾಗಿರುವ ದಕ್ಷಿಣ ಕರ್ನಾಟಕ ಭಾಗದಲ್ಲಿ ತನ್ನ ಶಕ್ತಿಯನ್ನು ಬಲಗೊಳಿಸಲು ಸಾಧ್ಯವಾಗಿಲ್ಲ ಎಂಬ ಬೇಸರ ಪಕ್ಷದ ರಾಷ್ಟ್ರೀಯ ನಾಯಕರಲ್ಲಿ ಮೂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ