Breaking News

ಜೆಡಿಎಸ್ ಟೀ ಶರ್ಟ್ ಹಾಕಿ ಬೈಕ್ ರ್ಯಾಲಿಗೆ ಬಂದವರಿಗೆ ಫುಲ್ ಟ್ಯಾಂಕ್ ಪೆಟ್ರೋಲ್

Spread the love

ಕೋಲಾರ: ಬೈಕ್​ ರ್ಯಾಲಿಯಲ್ಲಿ ಪಾಲ್ಗೊಂಡವರಿಗೆ ಉಚಿತ ಪೆಟ್ರೋಲ್​ ಎಂದಿದ್ದೇ ತಡ ಬೈಕ್​ ಸವಾರರು ಪೆಟ್ರೋಲ್​ ಬಂಕ್​ನಲ್ಲಿಯೇ ಮುಗಿಬಿದ್ದ ಪ್ರಸಂಗ ಕೋಲಾರದ ಮಾಲೂರಿನಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಜೆಡಿಎಸ್ ಪಕ್ಷದಿಂದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಪೆಟ್ರೋಲ್​ ಉಚಿತ ಎಂದು ಹೇಳಲಾಗಿತ್ತು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸಿಎಂ ಇಬ್ರಾಹಿಂ ಸೇರಿದಂತೆ ಹಲವಾರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಇದಕ್ಕಾಗಿ ಮಾಲೂರು ಜೆಡಿಎಸ್ ಅಭ್ಯರ್ಥಿ ಜಿ.ಇ.ರಾಮೇಗೌಡ ಬೈಕ್​ ರ್ಯಾಲಿಯಲ್ಲಿ ಪಾಲ್ಗೊಳ್ಳುವವರಿಗೆ ಉಚಿತ ಪೆಟ್ರೋಲ್​ ವ್ಯವಸ್ಥೆಯನ್ನು ಮಾಡಿದ್ದರು.

ಜೆಡಿಎಸ್ ಟೀ ಶರ್ಟ್ ಹಾಕಿ ಬೈಕ್ ರ್ಯಾಲಿಗೆ ಬಂದವರಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿಕೊಂಡು,ಬೈಕ್ ಮೇಲೆ RG ಎಂದು ಮಾರ್ಕ್ ಹಾಕಿ ಕಳುಹಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಹಿಳೆಯರಿಗೆ ಟೋಕನ್ ವಿತರಣೆ, ಕಾರ್ಯಕ್ರಮ ಮುಗಿದ ಬಳಿಕ ಅಕ್ಕಿ ಮೂಟೆ ನೀಡುವುದಾಗಿ ಭರವಸೆ ನೀಡಲಾಗಿತ್ತು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ