Breaking News

ಶಿಕ್ಷಕನ ಮೇಲೆ ಹಲ್ಲೆಗೆ ಯತ್ನ: ಮೂವರು ವಿದ್ಯಾರ್ಥಿಗಳು ಅಮಾನತು!

Spread the love

ತಮಿಳುನಾಡು: ಶಾಲೆಯ ಮೂವರು ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ನಿಂದಿಸಿದ್ದಲ್ಲದೇ, ಹಲ್ಲೆಗೆ ಯತ್ನಿಸಿದ್ದು, ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿರುವ ಘಟನೆ ತಮಿಳುನಾಡಿನ ಮದನೂರ್ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಇದೀಗ ಸೋಶಿಯಲ್‌ ಮೀಡಿಯಾದಲ್ಲಿ ಅದರ ವಿಡಿಯೋ ಕೂಡ ವೈರಲ್ ಆಗುತ್ತಿದೆ.

 

ಏನಿದು ಘಟನೆ?

ಸಸ್ಯಶಾಸ್ತ್ರದ ಶಿಕ್ಷಕ ಸಂಜಯ್ ಗಾಂಧಿ ಅವರು 12 ನೇ ತರಗತಿಯ ವಿದ್ಯಾರ್ಥಿಗಳಿಗೆ ತಮ್ಮ ದಾಖಲೆ ಪುಸ್ತಕಗಳನ್ನು ಸಲ್ಲಿಸುವಂತೆ ಹೇಳಿದರು. ಈ ವೇಳೆ ತರಗತಿಯ ವಿದ್ಯಾರ್ಥಿಯಾದ ಮಾರಿ ಎಂದು ಗುರುತಿಸಲಾದ ಹುಡುಗ ನಿದ್ರಿಸುತ್ತಿರುವುದನ್ನು ಕಂಡು ಶಿಕ್ಷಕನು ಪ್ರಶ್ನಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ವಿದ್ಯಾರ್ಥಿಯು ಅವಾಚ್ಯ ಶಬ್ದಗಳಿಂದ ನಿಂದಿಸತೊಡಗಿದ್ದಾನೆ. ಅಷ್ಟೇ ಅಲ್ಲದೇ ಅವರು ಶಿಕ್ಷಕನ ಮೇಲೆ ಹಲ್ಲೆ ನಡೆಸಲು ಕೈಗಳನ್ನು ಮೇಲಕ್ಕೆತ್ತಿರುವ ದೃಶ್ಯ ಕಂಡುಬಂದಿದೆ.

ವಿದ್ಯಾರ್ಥಿಗಳು ಅಮಾನತು

ಘಟನೆ ಬೆಳಕಿಗೆ ಬಂದ ಕೂಡಲೇ ಕಂದಾಯ ಅಧಿಕಾರಿಗಳು, ಆರ್‌ಡಿಒ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಶಿಕ್ಷಕ ಮತ್ತು ವಿದ್ಯಾರ್ಥಿಗಳನ್ನು ಪ್ರಶ್ನಿಸಿದ ನಂತರ, ವೀಡಿಯೊದಲ್ಲಿ ಕಂಡುಬರುವ ಇಬ್ಬರು ವಿದ್ಯಾರ್ಥಿಗಳು ಮತ್ತು ಘಟನೆಯಲ್ಲಿ ಸಹಚರ ಎಂದು ಪರಿಗಣಿಸಲಾದ ಮೂರನೇ ವಿದ್ಯಾರ್ಥಿಯನ್ನು ಅಮಾನತುಗೊಳಿಸಲಾಗಿದೆ.


Spread the love

About Laxminews 24x7

Check Also

ಸಿಎಂ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದವರೇ ವಿಶ್ವಾಸ ಕಳೆದುಕೊಂಡಿದ್ದಾರೆ: ಬಿ ವೈ ವಿಜಯೇಂದ್ರ

Spread the loveಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದ ಶಾಸಕರುಗಳೇ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ